Sunday, July 7, 2024
Homeಮನರಂಜನೆಕರಾವಳಿಯಲ್ಲಿ ಮೂರು ಅವತಾರ ಎತ್ತಿದ ಪ್ರಜ್ವಲ್‌

ಕರಾವಳಿಯಲ್ಲಿ ಮೂರು ಅವತಾರ ಎತ್ತಿದ ಪ್ರಜ್ವಲ್‌

ಡೈನಾಮಿಕ್‌ ಪ್ರಿನ್ಸ್ ಪ್ರಜ್ವಲ್‌ ದೇವರಾಜ್‌ ಅಭಿನಯಿಸುತ್ತರುವ ಕರಾವಳಿ ಚಿತ್ರ ಈಗಾಗಲೇ ಫಸ್ಟ್ ಲುಕ್‌ ಮತ್ತು ಪೋಸ್ಟರ್‌ ಮೂಲಕ ಭಾರೀ ಕುತೂಹಲ ಮೂಡಿಸಿದೆ. ಈಗ ಮತ್ತೊಂದು ಭರ್ಜರಿ ಪೋಸ್ಟ್ ಅನಾವರಣವಾಗಿದೆ. ಪ್ರಜ್ವಲ್‌ ದೇವರಾಜ್‌ ಹುಟ್ಟುಹಬ್ಬದ ಪ್ರಯುಕ್ತ ಬಂದಿರುವ ಈ ಪೋಸ್ಟರ್‌ ಕರಾವಳಿ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಸಿನಿಮಾದಿಂದ ಈಗಾಗಲೇ ರಿಲೀಸ್‌ ಆಗಿರುವ ಪ್ರಜ್ವಲ್‌ ಅವರ ಎರಡು ಲುಕ್‌ ವೈರಲ್‌ ಆಗಿದೆ.

ವಿಭಿನ್ನ ಅವತಾರಗಳಲ್ಲಿ ಕಾಣಿಸಿಕೊಂಡಿರುವ ಪ್ರಜ್ವಲ್‌ ಈ ಸಿನಿಮಾದಲ್ಲಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿಸಿದೆ. ಯಕ್ಷಗಾನ ಕಂಬಳ, ಮಹಿಷಾಸುರ ಹೀಗೆ ವೆರೈಟಿ ಗೆಟಪ್‌ನಲ್ಲಿ ಪ್ರಜ್ವಲ್‌ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಈ ಸಿನಿಮಾದಲ್ಲಿ ಪ್ರಜ್ವಲ್‌ ಯಕ್ಷಗಾನ ಕಲಾವಿದನಾ ಅಥವಾ ಕಂಬಳ ಕೊಡಿಸುವವನಾ? ಡೈನಾಮಿಕ್‌ ಪ್ರಿನ್ಸ್ ಪಾತ್ರ ಯಾವುದು ಎನ್ನುವ ಕುತೂಹಲ ಹೆಚ್ಚಾಗಿದೆ. ಪ್ರಜ್ವಲ್‌ ಅವರ ವೆರೈಟಿ ಗೆಟಪ್‌ನ ಪೋಸ್ಟರ್‌ಗಳನ್ನು ನೋಡುತ್ತಿದ್ದರೆ ತ್ರಿಪಾತ್ರದಲ್ಲಿ ನಟಿಸುತ್ತಿದ್ದಾರಾ ಎನ್ನುವ ಅನುಮಾನ ಕೂಡ ಮೂಡಿಸುವಂತಿದೆ.

ಕರಾವಳಿ ಈಗಾಗಲೇ 60ರಷ್ಟು ಚಿತ್ರೀಕರಣ ಮುಗಿಸಿದೆ. ಸಿನಿಮಾದಲ್ಲಿ ಪ್ರಜ್ವಲ್‌ಗೆ ನಾಯಕಿಯಾಗಿ ನಟಿ ಸಂಪದಾ ಕಾಣಿಸಿಕೊಂಡಿದ್ದಾರೆ. ಬಹುತೇಕ ಸಿನಿಮಾ ಕರಾವಳಿಯ ಸುತ್ತಮುತ್ತನೇ ಚಿತ್ರೀಕರಣಗೊಂಡಿದೆ.

ಈ ಸಿನಿಮಾಗೆ ಗುರುದತ್‌ ಗಾಣಿಗ ನಿರ್ದೇಶನದ ಜೊತೆಗೆ ಅವರದೇ ಗಾಣಿಗ ಫಿಲ್ಮ್ಸ್ ಹಾಗೂ ವಿಕೆ ಫಿಲ್ಮ್ಸ್ ಅಸೋಸಿಯೇಷನ್‌ನಲ್ಲಿ ನಿರ್ಮಾಣವಾಗುತ್ತಿದೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್‌ ಡ್ರಾಪ್‌ ನಲ್ಲಿ ಸಿನಿಮಾ ಮೂಡಿ ಬರಲಿದೆ. ಈ ಚಿತ್ರಕ್ಕೆ ಸಚಿನ್‌ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ.

RELATED ARTICLES

Latest News