Friday, June 14, 2024
Homeರಾಜ್ಯಪ್ರಜ್ವಲ್ ರೇವಣ್ಣ ಮತ್ತೆ SIT ಕಸ್ಟಡಿಗೆ

ಪ್ರಜ್ವಲ್ ರೇವಣ್ಣ ಮತ್ತೆ SIT ಕಸ್ಟಡಿಗೆ

ಬೆಂಗಳೂರು, ಜೂ.6- ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‍ಐಟಿಯಿಂದ ಬಂಧನಕ್ಕೆ ಒಳಗಾಗಿರುವ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿಯನ್ನು ಜೂನ್ 10ರವರೆಗೆ ವಿಸ್ತರಿಸಲಾಗಿದೆ. ಆರು ದಿನಗಳ ಕಾಲ ಎಸ್‍ಐಟಿ ವಶಕ್ಕೆ ನೀಡಿದ್ದ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಎಸ್‍ಐಟಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಮತ್ತೆ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಧಿಶರು ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಜೂ.10ರವರೆಗೆ ಎಸ್‍ಐಟಿ ವಶಕ್ಕೆ ನೀಡಿದರು.

ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಎಸ್‍ಐಟಿ ಮಾಹಿತಿ ಕಲೆ ಹಾಕಿ ಸಾಕ್ಷಾಧಾರ ಸಂಗ್ರಹಿಸಲು ಪ್ರಯತ್ನಿಸುತ್ತಿವೆ. ಆದರೆ, ಪ್ರಜ್ವಲ್ ಸೂಕ್ತ ರೀತಿಯಲ್ಲಿ ಸ್ಪಂದಿಸದ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆ ಅಗತ್ಯವಿದೆ. ಮತ್ತೆ ಕಸ್ಟಡಿಗೆ ನೀಡುವಂತೆ ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ 4 ದಿನಗಳ ಕಾಲ ಎಸ್‍ಐಟಿ ವಶಕ್ಕೆ ನೀಡಿದೆ.

RELATED ARTICLES

Latest News