ಪ್ರಜ್ವಲ್‌ ರೇವಣ್ಣ ಪ್ರಕರಣ : ಎಸ್‌ಐಟಿ ಅಧಿಕಾರಿಗಳ ಜತೆ ಸಿಎಂ ಮಹತ್ವದ ಸಭೆ

ಬೆಂಗಳೂರು,ಮೇ.4- ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ಎಸ್‌ಐಟಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಗೃಹಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು. ಪ್ರಕರಣದ ಸಂಬಂಧಪಟ್ಟಂತೆ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಮುಖ್ಯಮಂತ್ರಿಯವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ನಾಪತ್ತೆಯಾಗಿದ್ದು, ಲುಕ್‌ಔಟ್‌ ನೋಟಿಸ್‌ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು. ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ … Continue reading ಪ್ರಜ್ವಲ್‌ ರೇವಣ್ಣ ಪ್ರಕರಣ : ಎಸ್‌ಐಟಿ ಅಧಿಕಾರಿಗಳ ಜತೆ ಸಿಎಂ ಮಹತ್ವದ ಸಭೆ