ಬೆಂಗಳೂರು,ಆ.3- ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇದರಿಂದ ರಾಜ್ಯ ಪೊಲೀಸ್ ಇಲಾಖೆಗೆ ಕೀರ್ತಿ ಬಂದಂತಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತೀರ್ಪು ರಾಜ್ಯದ ಮಟ್ಟಿಗೆ ಐತಿಹಾಸಿಕ ತೀರ್ಪಾಗಿದೆ. ಸಿಐಡಿ, ಎಸ್‌ಐಟಿ ತಂಡ ಒಳ್ಳೆ ಕೆಲಸ ಮಾಡಿದ್ದು, ಆ ತಂಡವನ್ನು ಅಭಿನಂದಿಸುತ್ತೇನೆ ಎಂದರು.
ಸಾಮಾನ್ಯವಾಗಿ ಇಂತಹ ಪ್ರಕರಣಗಳ ವಿಚಾರಣೆ ವರ್ಷಾನುಗಟ್ಟಲೇ ಸಮಯ ತೆಗೆದುಕೊಳ್ಳುತ್ತದೆ. ಆದರೆ ಈ ಪ್ರಕರಣದಲ್ಲಿ ಒಂದು ವರ್ಷ 4 ತಿಂಗಳಲ್ಲೇ ತೀರ್ಪು ಬಂದಿದೆ. ಇಂತಹ ಪ್ರಕರಣಗಳಲ್ಲಿ ಕಾರ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ಹಾಗೂ ರಾಷ್ಟ್ರಪತಿ ಪದಕಕ್ಕೂ ಶಿಫಾರಸ್ಸು ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಕಾರ್ಯಪಡೆ ರಚನೆ:
ಮಾದಕವಸ್ತುಗಳ ವಿರುದ್ಧ ನಾವು ಸಮರ ಸಾರಿದ್ದು, ಡ್ರಗ್‌್ಸ ಕಾರ್ಯಪಡೆ ರಚನೆ ಮಾಡಲಾಗಿದೆ. ರಾಜ್ಯದಲ್ಲಿ ಪ್ರತ್ಯೇಕವಾಗಿ ಮಾದಕವಸ್ತುಗಳ ವಿರೋಧಿ ಕಾರ್ಯಪಡೆ ಘಟಕಕ್ಕೆ ಅಗತ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಿ ಆದೇಶ ಹೊರಡಿಸಲಾಗಿದೆ. ಅಧಿಕಾರಿ ಮತ್ತು ಸಿಬ್ಬಂದಿ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಮಾದಕವಸ್ತುಗಳ ವಿರೋಧಿ ಕಾರ್ಯಪಡೆ ಘಟಕಕ್ಕೆ 10 ಹುದ್ದೆಗಳನ್ನು ಸೃಜಿಸಲಾಗಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಈ ಘಟಕ ಕಾರ್ಯ ನಿರ್ವಹಿಸಲಿದೆ. ಇದು ಡಿಜಿ ಮತ್ತು ಐಜಿಪಿಯವರ ಅಧೀನದಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ಡಿಜಿ ಸೈಬರ್ ಕಮಾಂಡರ್ ಅವರಿಗೆ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.
- ರಾಷ್ಟ್ರಪತಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ
- ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆಯಿಂದ ರಾಜ್ಯ ಪೊಲೀಸ್ ಇಲಾಖೆಗೆ ಕೀರ್ತಿ ಬಂದಂತಾಗಿದೆ : ಗೃಹಸಚಿವ ಪರಮೇಶ್ವರ್
- ಉತ್ತರ ಪ್ರದೇಶ : ಕಾಲುವೆಗೆ ವಾಹನ ಉರುಳಿ ವಿದ್ದು 11ಮಂದಿ ಸಾವು
- ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ, ಮೇಲ್ಮನವಿ ಸಲ್ಲಿಸಲು ಸಿದ್ಧತೆ
- ಬೆಂಗಳೂರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾವೆಸಗಿದ ಪಿಜಿ ಮಾಲೀಕ