Monday, August 4, 2025
Homeರಾಜ್ಯಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ, ಮೇಲ್ಮನವಿ ಸಲ್ಲಿಸಲು ಸಿದ್ಧತೆ

ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ, ಮೇಲ್ಮನವಿ ಸಲ್ಲಿಸಲು ಸಿದ್ಧತೆ

Prajwal Revanna sentenced to life imprisonment, ready to appeal

ಬೆಂಗಳೂರು, ಆ.3-ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 11.25 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ.

ವಿಶೇಷ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ವಕೀಲರು ಹಾಗೂ ಕಾನೂನು ತಜ್ಞರ ಸಲಹೆಯನ್ನು ಪ್ರಜ್ವಲ್‌ ರೇವಣ್ಣ ಅವರ ಕುಟುಂಬದವರು ಪಡೆಯುತ್ತಿದ್ದಾರೆ. ರಾಜ್ಯ ಹೈಕೋರ್ಟಿನಲ್ಲಿ ತೀರ್ಪಿನ ಬಗ್ಗೆ ಮೇಲನವಿ ಸಲ್ಲಿಸುವ ಬಗ್ಗೆ ವಕೀಲರೊಂದಿಗೆ ಗಂಭೀರ ಸಮಾಲೋಚನೆ ನಡೆಸಿದ್ದಾರೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.

ಗರಿಷ್ಠ ಪ್ರಮಾಣ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿರುವುದು ಪ್ರಜ್ವಲ್‌ ಅವರ ಕುಟುಂಬದಲ್ಲಿ ಆಘಾತವನ್ನುಂಟು ಮಾಡಿದೆ. ಶುಕ್ರವಾರ ನ್ಯಾಯಾಲಯವು ಪ್ರಜ್ವಲ್‌ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು. ನಿನ್ನೆ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿ ಗರಿಷ್ಠ ಪ್ರಮಾಣದ ಜೀವಾವಧಿ ಶಿಕ್ಷೆ ಹಾಗೂ ದಂಡವನ್ನು ವಿಧಿಸಿದೆ.

ತೀರ್ಪಿನ ಪ್ರತಿ ಪಡೆದು ಪ್ರಜ್ವಲ್‌ ಪರ ವಕಾಲತ್ತು ವಹಿಸಿದ್ದ ವಕೀಲರು ಹಾಗೂ ಕಾನೂನು ತಜ್ಞರೊಂದಿಗೆ ಯಾವ ರೀತಿ ಮೇಲನವಿ ಸಲ್ಲಿಸಬೇಕು ಎಂಬ ವಿಚಾರದ ಸುಧೀರ್ಘ ಸಮಾಲೋಚನೆ ನಡೆಸುತ್ತಿದ್ದು, ಆದಷ್ಟು ಬೇಗ ಹೈಕೋರ್ಟಿನಲ್ಲಿ ಮೇಲನವಿ ಸಲ್ಲಿಸುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಿವೆ.ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡುವಂತೆ ನ್ಯಾಯಾಲಯದಲ್ಲಿ ಹಾಜರಿದ್ದ ಪ್ರಜ್ವಲ್‌ ರೇವಣ್ಣ ಅವರು ಕಣ್ಣೀರು ಸುರಿಸಿ ಮನವಿ ಮಾಡಿಕೊಂಡಿದ್ದರು.

ಪ್ರಜ್ವಲ್‌ಗೆ 15528 ಕೈದಿ ನಂಬರ್‌
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಆಗ್ರಹಾರ ಬಂಧಿಖಾನೆಯಲ್ಲಿರುವ ಜೆಡಿಎಸ್‌‍ ನಾಯಕ ಪ್ರಜ್ವಲ್‌ ರೇವಣ್ಣ ಅವರಿಗೆ 15528 ಕೈದಿ ನಂಬರ್‌ ನೀಡಲಾಗಿದೆ.ನ್ಯಾಯಾಲಯದ ತೀರ್ಪಿನಿಂದ ಆಘಾತಕ್ಕೊಳಗಾಗಿರುವ ಪ್ರಜ್ವಲ್‌ ಅವರು ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಜೈಲಿನಲ್ಲಿ ಅವರಿಗೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗುತ್ತಿದೆ.ಜೈಲು ಅಧಿಕಾರಿಗಳ ಪ್ರಕಾರ, ಅಪರಾಧಿಗಳಿಗೆ ಪ್ರಮಾಣಿತ ಡ್ರೆಸ್‌‍ ಕೋಡ್‌ ನೀಡಲಾಗಿದೆ. ಇಂದು ಬೆಳಿಗ್ಗೆ ಅವರಿಗೆ 15528 ಕೈದಿ ನಂಬರ್‌ ನೀಡಲಾಗಿದೆ.ಈ ಪ್ರಕರಣವು ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಕುಟುಂಬದ ಗನ್ನಿಕಾಡ ತೋಟದ ಮನೆಯಲ್ಲಿ ಮನೆಕೆಲಸದಾಕೆಯಾಗಿ ಕೆಲಸ ಮಾಡುತ್ತಿದ್ದ 48 ವರ್ಷದ ಮಹಿಳೆಗೆ ಸಂಬಂಧಿಸಿದಾಗಿದೆ.

RELATED ARTICLES

Latest News