Friday, March 29, 2024
Homeಜಿಲ್ಲಾ ಸುದ್ದಿಗಳುಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

ಹಾಸನ,ಮಾ.28- ಸಂಸದ ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆಯ ಶ್ರೀರಂಗನಾಥ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ಉಪಸ್ಥಿತರಿದ್ದರು.

ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ತಮ್ಮ ಉಮೇದುವಾರಿಕೆಯನ್ನು ಪ್ರಜ್ವಲ್ ರೇವಣ್ಣ ಸಲ್ಲಿಸಿದರು. ಚುನಾವಣಾಧಿಕಾರಿಯಾಗಿರುವ ಹಾಸನ ಜಿಲ್ಲಾಧಿಕಾರಿ ಅವರಿಗೆ ಪ್ರಜ್ವಲ್ ರೇವಣ್ಣ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ, ಶಾಸಕ ಸ್ವರೂಪ್ ಪ್ರಕಾಶ್ ಉಪಸ್ಥಿತರಿದ್ದರು.

RELATED ARTICLES

Latest News