Saturday, April 13, 2024
Homeರಾಜ್ಯಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳ ಬಿಡುಗಡೆಗೆ ಕಾಂಗ್ರೆಸ್ ಸಹಕರಿಸಿದೆ : ಪ್ರಹ್ಲಾದ್ ಜೋಶಿ

ಹಳೇ ಹುಬ್ಬಳ್ಳಿ ಗಲಭೆ ಆರೋಪಿಗಳ ಬಿಡುಗಡೆಗೆ ಕಾಂಗ್ರೆಸ್ ಸಹಕರಿಸಿದೆ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ,ಫೆ.17- ಕಾಂಗ್ರೆಸ್‍ಗೆ ಮೊದಲಿನಿಂದಲೂ ಗಲಭೆ ಆರೋಪಿಗಳ ಪರ ಸಹಾನುಭೂತಿ ಇದ್ದುದ್ದರಿಂದ ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಸುದ್ದಿಗಾರರರೊಂದಿಗೆ ಮಾತನಾಡಿದ ಸಚಿವರು, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 111 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ದೂರಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ ಜಾಮೀನು ನೀಡಲು ಕಾರಣವಾಗಿದೆ ಎಂದು ಅಭಿಪ್ರಾಯಿಸಿದ್ದಾರೆ. ಬಿಡುಗಡೆಗೆ ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ಆರೋಪಿಗಳ ಬಿಡುಗಡೆಗಾಗಿ ಲೆಟರ್ ಕೊಡುವುದು, ಒತ್ತಾಯ ಮಾಡುವುದು ನಡದೇ ಇತ್ತು ಎಂದು ಆರೋಪಿಸಿದ್ದಾರೆ.

ಬೆಂಗಳೂರು-ಮೈಸೂರು ಹೈವೆಯಲ್ಲಿ ಭೀಕರ ಅಪಘಾತ : ಮೂವರ ಸಾವು

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಮೇಲೆ ದೇಶ ದ್ರೋಹದ ಆರೋಪಗಳಿದ್ದವು. ಕಾಂಗ್ರೆಸ್ ಸರ್ಕಾರ ಸರಿಯಾಗಿ ವಾದ ಮಂಡಿಸದೆ ಬಿಡುಗಡೆಗೊಳಿಸಿದಂತಾಗಿದೆ. ಮುಂದಿನ ದಿನಗಳಲ್ಲಿ ಇದರ ಪರಿಣಾಮವನ್ನು ಸರ್ಕಾರ ಅನುಭವಿಸಲಿದೆ ಎಂದು ಎಚ್ಚರಿಸಿದ್ದಾರೆ. ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಕಲ್ಲು ತೂರಾಟ ಮಾಡಿ ಪೊಲೀಸ್ ವಾಹನಗಳು ಜಖಂಗೊಳಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೂ ಹಾನಿಗೊಳಿಸಿದ್ದರು. ಹೀಗಿದ್ದರೂ ಕಾಂಗ್ರೆಸ್ ಸರ್ಕಾರ ಇವರ ಬಿಡುಗಡೆಗೆ ಸಹಕರಿಸಿದೆ ಎಂದು ಆರೋಪಿಸಿದ್ದಾರೆ.

RELATED ARTICLES

Latest News