Monday, September 16, 2024
Homeಮನರಂಜನೆಆ.30ಕ್ಕೆ ಪ್ರಮೋದ್ ಶೆಟ್ಟಿ ಅಭಿನಯದ "ಲಾಫಿಂಗ್ ಬುದ್ಧ" ಬಿಡುಗಡೆ

ಆ.30ಕ್ಕೆ ಪ್ರಮೋದ್ ಶೆಟ್ಟಿ ಅಭಿನಯದ “ಲಾಫಿಂಗ್ ಬುದ್ಧ” ಬಿಡುಗಡೆ

ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ “ಲಾಫಿಂಗ್ ಬುದ್ಧ” ಚಿತ್ರ (ಆಗಸ್ಟ್ 30) ಈ ವಾರ ಬಿಡುಗಡೆಯಾಗುತ್ತಿದೆ.

ಪೊಲೀಸ್ ಅವರ ಕುಟುಂಬ ಹಾಗೂ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೆ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ‌. ತೇಜು ಬೆಳವಾಡಿ ನಾಯಕಿಯಾಗಿ ನಟಿಸಿದ್ದಾರೆ. ದಿಗಂತ್ ಮಂಚಾಲೆ ಅವರು ವಿಭಿನ್ನಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಬರುವಿಕೆಯಿಂದ ಕಥೆಗೆ ಒಂದು ತಿರುವು ಸಿಗುತ್ತದೆ. ಹಿರಿಯ ನಟ ಸುಂದರರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಭದ್ರಾವತಿ, ಜೋಗ, ಸಾಗರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ‌. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು ಹಾಗೂ ಟ್ರೇಲರ್ ಮೆಚ್ಚುಗೆ ಪಡೆದುಕೊಂಡಿದೆ.

ವಿಷ್ಣು ವಿಜಯ್ ಸಂಗೀತ ನಿರ್ದೇಶನ, ಎಸ್ ಚಂದ್ರಶೇಖರನ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಧರಣಿ ಗಂಗೆಪುತ್ರ ಅವರ ಕಲಾ ನಿರ್ದೇಶನ “ಲಾಫಿಂಗ್ ಬುದ್ಧ” ಚಿತ್ರಕ್ಕಿದೆ.

RELATED ARTICLES

Latest News