ಪ್ರವೀಣ್ ನೆಟ್ಟಾರು ಹಂತಕರ ಸುಳಿವು ನೀಡುವವರಿಗೆ 5 ಲಕ್ಷ ರೂ. ಬಹುಮಾನ ಘೋಷಣೆ

Social Share

ಬೆಂಗಳೂರು,ಜ.20- ಬಿಜೆಪಿ ಯುವ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳ ಬಗ್ಗೆ ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) 10 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

ಈ ಪ್ರಕರಣದ ಪ್ರಮುಖ ಆರೋಪಿಗಳಾಗಿ ತಲೆಮರೆಸಿಕೊಂಡಿರುವ ನಿಷೇಧಿತ ಪಿಎಫ್‍ಐನ ಸದಸ್ಯರಾಗಿರುವ ಕೊಡಾಜಿ ಮೊಹಮ್ಮದ್ ಶರೀಫ್ ಮತ್ತು ಮಸೂದ್.ಕೆ.ಎ ಎಂಬುವರ ಬಗ್ಗೆ ಸುಳಿವು ನೀಡಿದರೆ ತಲಾ 5 ಲಕ್ಷದಂತೆ ಬಹುಮಾನ ನೀಡುವುದಾಗಿ ಪ್ರಕಟಿಸಿದೆ.

ಆರೋಪಿಗಳ ಸುಳಿವು ಪತ್ತೆಯಾದರೆ ಬೆಂಗಳೂರಿನ ದೊಮ್ಮಲೂರು ಬಳಿ ಇರುವ ಎನ್‍ಐಎ ಎಸ್‍ಪಿಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

ದಕ್ಷಿಣ ಸಿಯೋಲ್ ಬೆಂಕಿ ಅವಗಡ, 500ಕ್ಕೂ ಹೆಚ್ಚು ಜನರ ಸ್ಥಳಾಂತರ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31) ಅವರನ್ನು ಜುಲೈ 26ರಂದು ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ದಾಳಿಯಿಂದ ಗಂಭೀರ ಗಾಯಗೊಂಡಿದ್ದ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದರು.

ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಬಲೆ ಬೀಸಿರುವ ಪೊಲೀಸರು ಕೇರಳ ಗಡಿಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ಕೊಲೆ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

Praveen Nettaru, murder, NIA, declares, Rs 5 lakh, reward, two, PFI, members,

Articles You Might Like

Share This Article