ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

Social Share

ಬೆಂಗಳೂರು,ಜು.28- ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ. ತಮ್ಮದೇ ಪಕ್ಷ ಆಡಳಿತದಲ್ಲಿದ್ದರೂ ಪಕ್ಷದ ಕಾರ್ಯಕರ್ತರು, ಸೈದ್ಧಾಂತಿಕ ಬೆಂಬಲಿಗರ ಸಾಲು ಸಾಲು ಹತ್ಯೆಗಳಾಗುತ್ತಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಜಿಲ್ಲಾ ಮಟ್ಟದ ಹಲವು ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಪ್ರವೀಣ್ ಹತ್ಯೆಯನ್ನು ಖಂಡಿಸಿ ರಾಜೀನಾಮೆ ನೀಡಿರುವ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂದೀಪ್ ಹರವಿನಂಗಡಿ ಬಿಜೆಪಿಯ ಸಿದ್ಧಾಂತಕ್ಕಾಗಿ ಅನೇಕ ಕಾರ್ಯಕರ್ತರ ಬಲಿದಾನ ನಡೆದಿರುವಂಥಹದ್ದು ಇತಿಹಾಸವಾದರೆ, ಇಂದಿನ ಕಾಲಘಟ್ಟದಲ್ಲೂ ಕೂಡಾ ಸೈದ್ಧಾಂತಿಕ ವಿಚಾರಧಾರೆಗೆ ಹೋರಾಡುವಂತಹ ದುರ್ಗತಿ ಬಂದಿರುವುದು ಕಾರ್ಯಕರ್ತರಿಗೆ ನೋವಾಗುತ್ತಿದೆ.

ಪ್ರವೀಣ್ ನೆಟ್ಟಾರು ಸಾವು ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು, ಹಿಂದೆಲ್ಲಾ ನಡೆದ ಕೊಲೆಗಳಿಗೆ ಯಾವ ರೀತಿಯಲ್ಲಿ ನ್ಯಾಯ ಸಿಕ್ಕಿದೆ ಎನ್ನುವುದು ನಮ್ಮ ಕಣ್ಣಮುಂದೆಯೇ ಇದೆ. ಕಠಿಣ ಕ್ರಮ ಎನ್ನುವ ಭರವಸೆ ಭರವಸೆಯಾಗಿಯೇ ಉಳಿದಿರುವ ಕಾರಣ ಬಿಜೆಪಿ ಚಿಕ್ಕಮಗಳೂರು ಜಿಲ್ಲಾ ಯುವಮೋರ್ಚ ಅಧ್ಯಕ್ಷ ಹುದ್ದೆಯಾದಿಯಾಗಿ ಯುವಮೋರ್ಚಾದ ಎಲ್ಲಾ ಪದಾಧಿಕಾರಿಗಳು ಹಾಗೂ 9 ಮಂಡಲದ ಅಧ್ಯಕ್ಷರು ಸೇರಿ ಎಲ್ಲರೂ ಪಕ್ಷದ ಜವಾಬ್ದಾರಿಗಳಿಗೆ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ರಾಜರಾಜೇಶ್ವರಿ ನಗರ ಮಂಡಲದ ಸಾಮಾಜಿಕ ಜಾಲತಾಣದ ಸಂಚಾಲಕನ ಹುದ್ದೆಗೆ ಶ್ರೀನಿವಾಸ್ ಗೌಡ ಅವರು ರಾಜೀನಾಮೆ ನೀಡಿದ್ದರೆ, ಚಿಕ್ಕಮಗಳೂರು ಜಿಲ್ಲಾ ಮಾಧ್ಯಮ ಪ್ರಮುಖರಾದ ಪ್ರೀತಮ್ ಹೆಬ್ಬಾರ್ ಅವರೂ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಅರಭಾವಿ ಮಂಡಲ ಸಾಮಾಜಿಕ ಜಾಲತಾಣ ಸದಸ್ಯ ಸ್ಥಾನಕ್ಕೆ ಅವಿನಾಶ್ ಹಿರೇಮಠ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ರಾಜೀನಾಮೆ ಪತ್ರವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಹಿಂದೆ ಎಲ್ಲಾ ಹಿಂದೂಪರ ಕಾರ್ಯಕರ್ತರ ಹತ್ಯೆಯಾದಾಗ ಕಠಿಣ ಕ್ರಮ ಜರುಗಿಸಿದ್ದೀರಿ ಎಂಬುದು ನಮ್ಮ ಕಣ್ಮುಂದೆ ಇದೆ. ಕಠಿಣ ಕ್ರಮ ಎನ್ನುವುದು ಭರವಸೆ ಆಗಿಯೇ ಇದೆ ಎಂಬುದಕ್ಕೆ ಈ ರಾಜೀನಾಮೆ ಎಂದು ಉಲ್ಲೇಖ ಮಾಡಿದ್ದಾರೆ. ನಮ್ಮ ಕುಟುಂಬಗಳೂ ಇವೆ ಬಸವರಾಜ ಬೊಮ್ಮಾಯಿ ಸರ್ ಎಂದು ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದಾರೆ.

ಹಾಸನ ಜಿಲ್ಲಾಯ ಅರಸೀಕೆರೆ ನಗರ ಬಿಜೆಪಿ ಮಂಡಲದ ಅಧ್ಯಕ್ಷ ಪುರುಷೋತ್ತಮï, ಕಾರ್ಯದರ್ಶಿ ಚಂದ್ರು, ಉಪಾಧ್ಯಕ್ಷ ಸುಭಾಷ್, ಜಿಲ್ಲಾ ಯುವ ಮೋರ್ಚಾ ಖಂಜಾÁಂಚಿ ಯುವರಾಜ್ ಸೇರಿ ಐವರು ರಾಜೀನಾಮೆ ನೀಡಿದ್ದಾರೆ. ಆರೋಪಿಗಳನ್ನು ಬಂಧಿಸುವವರೆಗೂ ಪಕ್ಷದ ಚಟುವಟಿಕೆಗಳನ್ನು ಮಾಡುವುದಿಲ್ಲ. ಪ್ರವೀಣ್ ಹತ್ಯೆ ಆರೋಪಿಗಳನ್ನು ಬಂಧಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲೂ ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಪರ್ವ ಪ್ರಾರಂಭವಾಗಿದ್ದು, ಬಿಜೆಪಿ ಅರಭಾವಿ ಮಂಡಲ ಸಾಮಾಜಿಕ ಜಾಲತಾಣ ಸದಸ್ಯ ಸ್ಥಾನಕ್ಕೆ ಅವಿನಾಶ್ ಹಿರೇಮಠ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ಹಿಂದೆ ಎಲ್ಲಾ ಹಿಂದೂಪರ ಕಾರ್ಯಕರ್ತರ ಹತ್ಯೆಯಾದಾಗ ಕಠಿಣ ಕ್ರಮ ಜರುಗಿಸಿದ್ದೀರಿ ಎಂಬುದು ನಮ್ಮ ಕಣ್ಮುಂದೆ ಇದೆ. ಆದರೆ ಅದು ಕೇವಲ ಭರವಸೆಯಾಗಿಯೇ ಉಳಿದಿದೆ ಎಂದು ಉಲ್ಲೇಖಿಸಿದ್ದಾರೆ.

ಮೈಸೂರಿನಲ್ಲಿ ಬಿಜೆಪಿ ಯುವ ಮೋರ್ಚಾದ ಎನ್.ಆರ್. ಕ್ಷೇತ್ರದ ಅಧ್ಯಕ್ಷ ಲೋಹಿತ್ ಸೇರಿದಂತೆ ಹಲವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಾವು ಹೇಳಿ ಕೇಳಿ ಅಲ್ಪಸಂಖ್ಯಾತ ಸಮುದಾಯ ಹೆಚ್ಚಾಗಿರುವ ಎನ್.ಆರ್. ಕ್ಷೇತ್ರದಲ್ಲೇ ಪಕ್ಷ ಸಂಘಟಿಸಬೇಕಿರುವ ಕಾರಣ ನಮ್ಮ ಮನೆಗಳಲ್ಲೂ ಆತಂಕ ಹೆಚ್ಚಾಗಿದೆ. ಈ ಕಾರಣ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲಾಯ ಬಿಜೆಪಿ ಯುವಮೋರ್ಚ ಕಾರ್ಯಕರ್ತರೆಲ್ಲರೂ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಾಗಲಕೋಟೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಅವರಿಗೆ ಸಲ್ಲಿಸಿದ್ದಾರೆ. ಅಲ್ಲದೆ ಬಿಜೆಪಿ ರಾಜ್ಯ ಪ್ರಮುಖರ ವಿರುದ್ಧ ಯುವ ಮೋರ್ಚಾ ಆಕ್ರೋಶ ಹೊರಹಾಕಿದೆ.

ಚಿಕ್ಕಮಗಳೂರಿನಲ್ಲೂ ಪ್ರವೀಣ್ ಹತ್ಯೆಗೆ ಆಕ್ರೋಶ ಹೊರ ಹಾಕಿ ಬಿಜೆಪಿ ಯುವ ಮೋರ್ಚ ಸದಸ್ಯರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಶಶಿ ಜಿಲ್ಲಾ ಕಾರ್ಯದರ್ಶಿ, ಮಂಡಲ ಅಧ್ಯಕ್ಷ ರಾಜೇಶ್, ಕಾಂಚನ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.

Articles You Might Like

Share This Article