ಬೆಂಗಳೂರು, ಮಾ. 17- ಕಳೆದ ಎರಡು ದಿನಗಳಿಂದ ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೂರ್ವ ಮುಂಗಾರು ಮಳೆಯಾಗಿದೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ. ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾದ ವರದಿಯಾಗಿದೆ.
ಬುಧವಾರ ರಾತ್ರಿ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡ ಮಳೆಯಾದ ವರದಿಯಾಗಿತ್ತು. ನಿನ್ನೆ ಸಂಜೆ ಹಾಗೂ ರಾತ್ರಿ ಕೂಡ ಮಳೆ ಮುಂದುವರೆದಿದ್ದು, ರಾಜ್ಯದ ಹಲವೆಡೆ ಚದುರಿದಂತೆ ಮಳೆಯಾಗಿದೆ. ಬೇಸಿಗೆಯ ಬಿಸಿಲಿನ ತಾಪ ಗಣನೀಯವಾಗಿ ಏರಿಕೆಯಾದಾಗ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುವುದು ಬೇಸಿಗೆಯಲ್ಲಿ ಸಹಜ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಬರೋಬ್ಬರಿ 4 ಸಾವಿರ ಚಿತ್ರಮಂದಿರಗಳಲ್ಲಿ ತೆರೆಗಪ್ಪಳಿಸುತ್ತಿದೆ ಕಬ್ಜ ಚಿತ್ರ
ಬೆಂಗಳೂರಿನಲ್ಲೂ ಕಳೆದ ಎರಡು ಮೂರು ದಿನಗಳಿಂದ ಬಿಸಿಲು ಹೆಚ್ಚಾಗಿದ್ದು, ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ವರೆಗೂ ದಾಖಲಾಗಿತ್ತು. ನಿನ್ನೆ ಸಂಜೆ ತುಂತುರು ಹನಿಯೊಂದಿಗೆ ಮಳೆ ಆರಂಭವಾಗಿತ್ತು.
ತ್ರಿಯಾಗುತ್ತಿದ್ದಂತೆ ರಾಜಧಾನಿಯ ಬಹುತೇಕ ಬಡಾವಣೆಗಳಲ್ಲಿ ಸಾಧಾರಣ ಮಳೆಯಾದ ವರದಿಯಾಗಿದೆ. ಇದರಿಂದ ಬಿಸಿಲಿನ ಬೇಗೆಯಿಂದ ಬಸವಳಿದ್ದ ಬೆಂಗಳೂರಿಗೆ ಮಳೆಯ ಸಿಂಚನ ತಂಪೆರೆದಂತಾಗಿದೆ.
ರಾಜಾಜಿನಗರ, ವಿಜಯನಗರ, ಮಹಾಲಕ್ಷ್ಮೀ ಬಡಾವಣೆ, ಶ್ರೀನಗರ, ಜಯನಗರ, ಕೆಂಗೇರಿ, ಕೋಣನಕುಂಟೆ ಕ್ರಾಸ್, ರಾಜರಾಜೇಶ್ವರಿನಗರ, ಮಲ್ಲೇಶ್ವರ, ವಿದ್ಯಾರಣ್ಯಪುರ, ಶಿವಾಜಿನಗರ, ಗಾಂನಗರ. ಎಂಜಿ ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಇನ್ನೆರಡು ದಿನ ಮಿಂಚು, ಗುಡುಗಿನಿಂದ ಕೂಡಿದ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳ ಕೆಲವೆಡೆ ಮಳೆಯಾಗಿದೆ.
ಗಿಫ್ಟ್ ಹಿಡಿದು ಮನವೊಲಿಸಲು ಬಂದ ಜನಪ್ರತಿನಿಗಳ ವಿರುದ್ಧ ಆಕ್ರೋಶ
ಮಾರ್ಚ್ ಏಪ್ರಿಲ್‍ನಲ್ಲಿ ಬೇಸಿಗೆ ಮಳೆಯಾಗುವುದು ಸಹಜ. ಆದರೆ, ವ್ಯಾಪಕ ಪ್ರಮಾಣದಲ್ಲಿ ಆಗುವುದಿಲ್ಲ. ಚದುರಿದಂತೆ ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುತ್ತದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
PreMonsoon, Rains, Bengaluru, Beat, Heat, till, Sunday,