Wednesday, January 8, 2025
Homeರಾಜ್ಯಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ : ಗೃಹಸಚಿವ ಪರಮೇಶ್ವರ್

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ : ಗೃಹಸಚಿವ ಪರಮೇಶ್ವರ್

Precautionary measures taken for New Year celebrations: Home Minister Parameshwar

ಬೆಂಗಳೂರು, ಡಿ.31– ಹೊಸ ವರ್ಷದ ಆಚರಣೆ ವೇಳೆ ಯಾವುದೇ ರೀತಿಯ ಅವಘಡಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈಗಾಗಲೇ ಪೊಲೀಸ್ ಅಧಿಕಾರಿಗಳ ಜೊತೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.

ಹೊಸವರ್ಷ ಹಾಗೂ ಕ್ರಿಸ್ಮಸ್ ಸಂದರ್ಭದಲ್ಲಿ ಮಾದಕವಸ್ತುಗಳ ಸರಬರಾಜು ಹೆಚ್ಚುವ ಸಾಧ್ಯತೆಯಿದ್ದುದರಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು.
ಕಳೆದ ಒಂದು ತಿಂಗಳಿನಿಂದಲೂ ವಿಶೇಷ ಅಭಿಯಾನವನ್ನೇ ಕೈಗೊಂಡು ಮಾದಕವಸ್ತುಗಳ ಸರಬರಾಜು ಹಾಗೂ ಮಾರಾಟವನ್ನು ನಿಯಂತ್ರಿಸಲಾಗಿದೆ ಎಂದರು.

ಜಿಲ್ಲೆಗಳಲ್ಲಿ ಕೂಡ ಮಾದಕವಸ್ತುಗಳ ಜಾಲವನ್ನು ನಿಷ್ಕ್ರಿಯಗೊಳಿಸಲು ಸಾಕಷ್ಟು ಪ್ರಯತ್ನ ನಡೆಸಲಾಗಿದೆ. ಪೊಲೀಸರು ಈ ನಿಟ್ಟಿನಲ್ಲಿ ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಹೊಸ ವರ್ಷದ ಆಚರಣೆಗೆ ಯಾವುದೇ ಬೆದರಿಕೆಗಳಿಲ್ಲ. ನಿರಾತಂಕವಾದ ವಾತಾವರಣವನ್ನು ನಿರ್ಮಿಸಲಾಗಿದೆ. ಬೆಂಗಳೂರಿನಲ್ಲಿ ಹೆಚ್ಚು ಜನ ಸೇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಸಾಕಷ್ಟು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಏಳೂವರೆ ಸಾವಿರಕ್ಕೂ ಅಧಿಕ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ವಿವರಿಸಿದರು.

ಈ ಹಿಂದಿನ ಅನುಭವಗಳನ್ನು ಆಧರಿಸಿ ಈ ಬಾರಿ ಇಡೀ ನಗರದಲ್ಲಿ ಪೊಲೀಸರ ಗಸ್ತುಗಳನ್ನು ಆಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಾದ ಎಂ.ಜಿ.ರಸ್ತೆ, ರ್ಯಾವಲ್ ರಸ್ತೆ, ಜಯನಗರ, ಕೋರಮಂಗಲ ಹಾಗೂ ಇತರ ಸ್ಥಳಗಳಲ್ಲಿ ಹಿರಿಯ ಅಧಿಕಾರಿಗಳ ಜವಾಬ್ದಾರಿಯೊಂದಿಗೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಹಾಟ್ಸ್ಪಾಟ್ಗಳಲ್ಲೂ ವಿಶೇಷ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಕಂಟ್ರೋಲ್ ರೂಂನಿಂದ ನಿಗಾ ವಹಿಸಲಾಗುತ್ತದೆ. ಸಮೀಪದಲ್ಲೇ ಪೊಲೀಸ್ ಸಿಬ್ಬಂದಿಗಳಿದ್ದು ಪ್ರತಿಕ್ರಿಯಿಸಲಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಆಧಾರ ರಹಿತವಾಗಿ ಆರೋಪ ಮಾಡುತ್ತಿದ್ದಾರೆ.

ಅನಗತ್ಯವಾಗಿ ಒಬ್ಬ ವ್ಯಕ್ತಿಯ ವಿರುದ್ಧ ಆಪಾದನೆ ಮಾಡಿ ತೇಜೋವಧೆ ಮಾಡುವುದು ಬಿಜೆಪಿಯಂತಹ ರಾಷ್ಟ್ರೀಯ ಪಕ್ಷಕ್ಕೆ ಶೋಭೆ ತರುವುದಿಲ್ಲ. ಬಿಜೆಪಿಯವರಿಗೆ ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸಿ ಅನುಭವವಿದೆ. ತಿಳಿಯದೆ ಮಾಡುವ ತಪ್ಪುಗಳಾದರೆ ಅದನ್ನು ಕ್ಷಮಿಸಬಹುದು. ಆದರೆ ಬಿಜೆಪಿ ದುರುದ್ದೇಶಪೂರಕವಾಗಿ ಆರೋಪ ಮಾಡುತ್ತಿದೆ ಎಂದರು.
ಪ್ರಿಯಾಂಕ್ ಖರ್ಗೆ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಅದರ ಪ್ರತೀಕಾರವಾಗಿ ಈಗ ಪೋಸ್ಟರ್ ವಾರ್ ಸೇರಿದಂತೆ ನಾನಾ ರೀತಿಯ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ ಎಂದು ದೂರಿದರು.

ಆತಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪಾಂಚಾಳ್ ಅವರ ಕುಟುಂಬ ಸದಸ್ಯರು ಮಾಡಿರುವ ಆರೋಪವನ್ನು ನಾನು ಗಮನಿಸಿದ್ದೇನೆ. ಎಲ್ಲವೂ ಸಿಐಡಿ ತನಿಖೆಯಾಗಲಿದೆ. ಅನಂತರ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ನಿರ್ಧರಿಸಬಹುದು. ತನಿಖೆಗೂ ಮೊದಲೇ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದರು. ನಟ ದರ್ಶನ್ ವಿರುದ್ಧ ಸುಪ್ರೀಂಕೋರ್ಟ್ಗೆ ಮೇಲನವಿ ಸಲ್ಲಿಸಲು ಈಗಾಗಲೇ ಸರ್ಕಾರ ಆದೇಶ ನೀಡಿದೆ. ಹಾಗಾಗಿ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

RELATED ARTICLES

Latest News