Saturday, July 27, 2024
Homeರಾಷ್ಟ್ರೀಯಪ್ರೇಮ್‌ ಸಿಂಗ್‌ ತಮಾಂಗ್‌ಗೆ 2ನೇ ಬಾರಿಗೆ ಸಿಕ್ಕಿಂ ಪಟ್ಟ

ಪ್ರೇಮ್‌ ಸಿಂಗ್‌ ತಮಾಂಗ್‌ಗೆ 2ನೇ ಬಾರಿಗೆ ಸಿಕ್ಕಿಂ ಪಟ್ಟ

ಗ್ಯಾಂಗ್‌ಟಕ್‌,ಜೂ.3- ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌‍ಕೆಎಂ) ಶಾಸಕಾಂಗ ಪಕ್ಷದ ನಾಯಕರಾಗಿ ಪ್ರೇಮ್‌ ಸಿಂಗ್‌ ತಮಾಂಗ್‌ ಆಯ್ಕೆಯಾಗಿದ್ದು, ಎರಡನೇ ಬಾರಿ ಸಿಕ್ಕಿಂ ಮುಖ್ಯಮಂತ್ರಿಯಾಗಿ ಶೀಘ್ರದಲ್ಲೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಎಲ್ಲ 31 ಶಾಸಕರು ಹಾಜರಿದ್ದರು.ಸಭೆಯಲ್ಲಿ ಎಸ್‌‍ಕೆಎಂ ಪ್ರಧಾನ ಕಾರ್ಯದರ್ಶಿ ಅರುಣ್‌ ಉಪ್ರೇತಿ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಸಿಎಂ ತಮಾಂಗ್‌ ಅವರ ಹೆಸರನ್ನು ಪ್ರಸ್ತಾಪಿಸಿದರು. ಅದನ್ನು ಪಕ್ಷದ ಶಾಸಕಿ ಸೋನಮ್‌ ಲಾಮಾ ಅನುಮೋದಿಸಿದರು.

ನಂತರ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪಕ್ಷದ ನಾಯಕರು ತಮಾಂಗ್‌ ಅವರ ಆಯ್ಕೆಗೆ ಅಭಿನಂದನೆ ಸಲ್ಲಿಸಿದ್ದು, ಅವರ ನಾಯಕತ್ವದಲ್ಲಿ ಸಮರ್ಪಣಾಭಾವದಿಂದ ಕೆಲಸ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ಪ್ರಕಟಣೆ ಹೇಳಿದೆ.

ಹಿಮಾಲಯ ರಾಜ್ಯ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ32 ಸದಸ್ಯ ಬಲದ ವಿಧಾನಸಭೆಯಲ್ಲಿ 31 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ. ಪ್ರತಿಪಕ್ಷ ಎಸ್‌‍ಡಿಎಫ್‌‍ ಕೇವಲ ಒಂದು ಸ್ಥಾನವನ್ನು ಪಡೆದುಕೊಂಡಿದೆ.

RELATED ARTICLES

Latest News