ನವದೆಹಲಿ,ಮಾ.18- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗಾಗಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಶೀಘ್ರದಲ್ಲೇ ಭೋಜನ ಕೂಟ ಆಯೋಜಿಸಲಿದ್ದಾರೆ ಎಂದು ತಿಳಿದುಬಂದಿದೆ.
ಭಾರತದೊಂದಿಗೆ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಳ್ಳಲು ನಿರ್ಧರಿಸಿರುವ ಬಿಡೆನ್ ಅವರು ಮೋದಿ ಅವರಿಗಾಗಿ ಭೋಜನ ಕೂಟ ಆಯೋಜಿಸುವ ಮೂಲಕ ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯದ ಬಗ್ಗೆ ಜಗತ್ತಿನ ಗಮನ ಸೆಳೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.
ಶ್ವೇತಭವನವು ಜೂನ್‍ನಲ್ಲಿ ಭೋಜನ ಕೂಟ ಆಯೋಜಿಸಲು ನಿರ್ಧರಿಸಿದೆ ಆದರೆ, ಇನ್ನು ದಿನಾಂಕ ಗೊತ್ತುಪಡಿಸಿಲ್ಲ ಎಂದು ಮೂಲಗಳು ಉಲ್ಲೇಖಿಸಿವೆ.
ಸಿಬಿಐ, ಇಡಿ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುತ್ತಿವೆ : ಶಾ
ಭಾರತವು ಸೆಪ್ಟೆಂಬರ್‍ನಲ್ಲಿ ನವದೆಹಲಿಯಲ್ಲಿ 20 ನಾಯಕರ ಗುಂಪಿನ ಶೃಂಗಸಭೆಯನ್ನು ಆಯೋಜಿಸುತ್ತಿದೆ, ಅಲ್ಲಿ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣವು ಚರ್ಚೆಯ ಮುಖ್ಯ ವಿಷಯಗಳಲ್ಲಿ ಒಂದಾಗಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಟದಲ್ಲಿ ಪಾಲ್ಗೊಳ್ಳುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಅಧ್ಯಕ್ಷ ಬಿಡೆನ್ ಅವರು ಆಸ್ಟ್ರೇಲಿಯಾ ಮತ್ತು ಜಪಾನ್ ನಾಯಕರೊಂದಿಗೆ ಕ್ವಾಡ್ ಶೃಂಗಸಭೆಗಾಗಿ ಮೇ ತಿಂಗಳಲ್ಲಿ ಪ್ರಧಾನಿ ಮೋದಿಯನ್ನು ಆಸ್ಟ್ರೇಲಿಯಾದಲ್ಲಿ ಭೇಟಿಯಾಗುತ್ತಿದ್ದಾರೆ.
ರಷ್ಯಾ ಅಧ್ಯಕ್ಷ ಪುಟಿನ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ
ನಿರ್ಣಾಯಕ ತಂತ್ರಜ್ಞಾನಗಳ ಪಾಲುದಾರಿಕೆಯು ಮಿಲಿಟರಿ ಯಂತ್ರಾಂಶಕ್ಕಾಗಿ ಮಾಸ್ಕೋದ ಮೇಲೆ ಐತಿಹಾಸಿಕ ಅವಲಂಬನೆಯನ್ನು ಕಡಿಮೆ ಮಾಡುವ ಮೂಲಕ ಮತ್ತು ಚೀನಾ ವಿರುದ್ಧ ಭಾರತಕ್ಕೆ ಬೆಂಬಲ ನೀಡಿ ರಷ್ಯಾ ಪ್ರಭಾವ ಕಡಿಮೆಗೊಳಿಸುವ ಉದ್ದೇಶದಿಂದ ಬಿಡೆನ್ ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.
President, Biden, may, host, PM Modi, state, dinner, summer,