ನವದೆಹಲಿ,ಜು.22-ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಸೋಮವಾರ ನಡೆದ ದಿಢೀರ್ ಬೆಳವಣಿಗೆಯಲ್ಲಿ ಜಗದೀಪ್ ಧನ್ಕರ್ ಅವರು ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ತಮ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಮನವಿ ಮಾಡಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದು, ಮುಂದಿನ ಪ್ರಕ್ರಿಯೆಗಳಿಗೆ ಗೃಹ ಇಲಾಖೆಗೆ ಕಳುಹಿಸಿಕೊಟಿದ್ದಾರೆ.ರಾಷ್ಟ್ರಪತಿಗೆ ಬರೆದಿದ್ದ ಪತ್ರದಲ್ಲಿ ಸಂವಿಧಾನದ 67(ಎ) ವಿಧಿಯ ಪ್ರಕಾರ ಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಗದೀಪ್ ಧನ್ಕರ್ ಉಲ್ಲೇಖಿಸಿದ್ದರು.
ತಮ ಅಧಿಕಾರಾವಧಿಯಲ್ಲಿ ದೊರೆತ ಅಚಲವಾದ ಬೆಂಬಲ ಮತ್ತು ಹಿತವಾದ ಅದ್ಬುತ ಕಾರ್ಯ ಸಂಬಂಧಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿಯವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾಗಿದ್ದು, ಅಧಿಕಾರಾವಧಿಯಲ್ಲಿ ಸಾಕಷ್ಟು ಕಲಿತಿರುವುದಾಗಿ ಅವರು ತಿಳಿಸಿದ್ದರು.
ಸಂಸತ್ತಿನ ಎಲ್ಲಾ ಸದಸ್ಯರಿಂದ ದೊರೆತ ಪ್ರೀತಿ, ವಿಶ್ವಾಸ ಮತ್ತು ಪ್ರೀತಿಯನ್ನು ಎಂದಿಗೂ ಮರೆಯಲ್ಲ. ನಮ ಮಹಾನ್ ಪ್ರಜಾಪ್ರಭುತ್ವದಲ್ಲಿ ಉಪ ರಾಷ್ಟ್ರಪತಿಯಾಗಿ ಅಪಾರ ಅನುಭವ ಗಳಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದರು. ಭಾರತದ ಪ್ರಗತಿ ಮತ್ತು ಭವಿಷ್ಯದ ಬಗ್ಗೆ ಅವರಿಗೆ ಸಂಪೂರ್ಣ ವಿಶ್ವಾಸವಿದೆ ಎಂದು ತಮ ಪತ್ರದ ಮೂಲಕ ವಿಶ್ವಾಸ ವ್ಯಕ್ತಪಡಿಸಿದ್ದರು.
- ವಿಶ್ವಸಂಸ್ಥೆ ಅಧಿವೇಶನಕ್ಕೆ ಗೈರಾಗಲಿದ್ದಾರೆ ಪ್ರಧಾನಿ ಮೋದಿ
- ವಿಷ್ಣುವರ್ಧನ್ ಮತ್ತು ಸರೋಜದೇವಿ ಅವರಿಗೆ ‘ಕರ್ನಾಟಕ ರತ್ನ’ ನೀಡುವಂತೆ ಡಿಕೆಶಿಗೆ ನಟಿಯರ ನಿಯೋಗ ಮನವಿ
- ಶೃಂಗೇರಿ : ನಡುರಸ್ತೆಯಲ್ಲೇ ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ
- ವಂಚನೆ ಕಲ್ಯಾಣವೇ ಈ ಕುಟುಂಬದ ಕಾಯಕ, ತಂದೆ-ತಾಯಿ ಇಲ್ಲದ ಯುವತಿಯರೇ ಟಾರ್ಗೆಟ್
- ಶಾಲೆಯ ಹೊರಗೆ ಬಾಲಕನ ಎದೆಗೆ ಚಾಕು ಇರಿತ