ಮೈಸೂರು ರೇಷ್ಮೆ ಸೀರೆ ಉಟ್ಟು ದಸರಾಗೆ ಮೆರಗು ತಂದ ರಾಷ್ಟ್ರಪತಿ ಮುರ್ಮು

Social Share

ಮೈಸೂರು, ಸೆ.26- ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆಯಲ್ಲಿ ಆಗಮಿಸಿ, ದಸರಾಗೆ ವಿಶೇಷ ಮೆರುಗು ತಂದ ರಾಷ್ಡ್ರಪತಿ ದ್ರೌಪದಿ ಮುರ್ಮು ಅವರು ದಸರಾ ಮಹೋತ್ಸವ ಉದ್ಘಾಟಿಸಿದ ಪ್ರಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ರಾಷ್ಟ್ರಪತಿಯವರಿಗಾಗಿ ವಿಶೇಷವಾಗಿ ನೇಯ್ದ ಮೈಸೂರು ರೇಷ್ಮೆ ಸೀರೆ ಇದು.ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಅಕೃತವಾಗಿ ಆಹ್ವಾನಿಸುವಾಗ ಗೌರವ ಸೂಚಕವಾಗಿ ಈ ಮೈಸೂರು ರೇಷ್ಮೆ ಸೀರೆ, ಫಲ ತಾಂಬೂಲ ನೀಡಿ ಗೌರವಿಸಿದ್ದರು.

ಇದೇ ಉಡುಪು ಧರಿಸಿ ರಾಷ್ಟ್ರಪತಿಯವರು ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದು ಮೈಸೂರಿಗರಿಗೆ ಸಂತಸ ತಂದಿದೆ.
ರಾಷ್ಟ್ರಪತಿಯವರು ಬಿಳಿ ಸೀರೆ ಇಷ್ಟಪಡುತ್ತಾರೆ ಎಂಬುದನ್ನು ಅರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಿ ಸ್ವಾಮ್ಯದ ಕೆಎಸ್ಐಸಿಯ ಸರ್ಕಾರಿ ರೇಷ್ಮೆ ಕಾರ್ಖಾನೆಗೆ ಈ ಉಡುಪು ತಯಾರಿಕೆಗೆ ಆದೇಶ ನೀಡಿ ಸಿದ್ಧಪಡಿಸಿದ್ದರು.

ಮೈಸೂರಿನ ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912ರಲ್ಲಿ ನಿರ್ಮಿಸಿದ ರೇಷ್ಮೆ ಕಾರ್ಖಾನೆ ಎಂಬ ಹೆಮ್ಮೆ ಈ ಕಾರ್ಖಾನೆಗೆ ಇದೆ.ಮೈಸೂರು ಸಿಲ್ಕï ಸೀರೆ ಬ್ರಾಂಡ್ ವಿಶ್ವಪ್ರಸಿದ್ಧ ಬ್ರಾಂಡ್ ಆಗಿದೆ. ನೂರಾರು ವರ್ಷಗಳಿಂದ ಮಹಿಳೆಯರಿಗೆ ಮೈಸೂರು ಸಿಲ್ಕï ಸೀರೆ ಎಂದರೆ ಎಲ್ಲಿಲ್ಲದ ಅಚ್ಚುಮೆಚ್ಚು.

ಹಾಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಷ್ಟಪಡುವ ನೈಸರ್ಗಿಕ ಬಿಳಿ ಬಣ್ಣದ ಅಪ್ಪಟ ರೇಷ್ಮೆ ಮತ್ತು ಅಪ್ಪಟ ಚಿನ್ನದ ಎಳೆಗಳನ್ನು ಬಳಸಿ ತಯಾರಿಸಿದ ಈ ಉಡುಪನ್ನು ಗೌರವ ಸೂಚಕವಾಗಿ ಅವರಿಗೆ ಸಮರ್ಪಿಸಲಾಗಿತ್ತು.

Articles You Might Like

Share This Article