ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ

Social Share

ಮೈಸೂರು,ಸೆ.26- ಸಾಂಸ್ಕøತಿಕ ನಗರಿ ಮೈಸೂರು ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ವಿಶ್ವ ವಿಖ್ಯಾತವಾದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022ಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು.

ಬೆಳಿಗ್ಗೆ 9.45ರಿಂದ 10.05ರ ವೃಶ್ಚಿಕ ಲಗ್ನದಲ್ಲಿ ಆರಂಭವಾದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ಲಭಿಸಿತು. ಬಳಿಕ ನಾಡಿನ ಹೆಮ್ಮೆಯ ನಾಡಗೀತೆ ಮೊಳಗಿಸಲಾಯಿತು.

ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿದ್ದಂತೆಯೆ ಮೊದಲು ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ತೆರಳಿದ ರಾಷ್ಟ್ರಪತಿಗಳು ನಾಡಿನ ಶಕ್ತಿ ಸ್ವರೂಪವಾದ ತಾಯಿಯ ದರ್ಶನ ಪಡೆದು ದೇವಸ್ಥಾನ ವೀಕ್ಷಿಸಿದರು. ಅಲ್ಲದೆ, ಈ ಪ್ರಸಿದ್ಧ ದೇವಸ್ಥಾನದ ಕುರಿತು ಮಾಹಿತಿ ಪಡೆದುಕೊಂಡರು. ಅವರು ವೇದಿಕೆಗೆ ಆಗಮಿಸುತ್ತಿದ್ದಂತೆಯೇ ಪೊಲೀಸ್ ಬ್ಯಾಂಡ್‍ನಿಂದ ರಾಷ್ಟ್ರಗೀತೆ ಮೊಳಗಿತು.

ಸಭೆಯಲ್ಲಿ ಸೂಜಿ ಬಿದ್ದರೂ ಸದ್ದಾಗುವಷ್ಟು ಶಾಂತಿನೆಲೆಸಿತ್ತು. ನಾಡ ಹಬ್ಬ- ದಸರಾ ಮಹೋತ್ಸವಕ್ಕೆ ಸಿಕ್ಕ ಅಭೂತಪೂರ್ವ ಚಾಲನೆಗೆ ಎಲ್ಲರನ್ನು ಮೂಕ ವಿಸ್ಮಿತರನ್ನಾಗಿಸಿತ್ತು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಚಿಣ್ಣರಿದ್ದರೂ ಕೂಡ ಶಾಂತಚಿತ್ತರಾಗಿ ಕುಳಿತು ತದೇಕಚಿತ್ತರಾಗಿ ಕಾರ್ಯಕ್ರಮ ವೀಕ್ಷಿಸಿ ಭಾರತದ ಪ್ರಥಮ ಪ್ರಜೆಯನ್ನು ಕಣ್ತುಂಬಿಸಿಕೊಂಡು ಪುಳಕಿತರಾದರು.

ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಹಚ್ಚ ಹಸಿರು ಜರತಾರಿ ಸೀರೆ ಉಡಿಸಿ ಸಕಲ ಆಭರಣಗಳಿಂದ ದೇವಿಯನ್ನು ಸಿಂಗರಿಸಲಾಗಿತ್ತು. ಬಂಗಾರದ ಒಡವೆಗಳು, ತಾಳಿ, ವಿವಿಧ ಬಗೆಯ ಹೂವುಗಳಿಂದ ತಾಯಿ ಚಾಮುಂಡಿಯ ಉತ್ಸವ ಮೂರ್ತಿ ಎಲ್ಲರ ಕಣ್ಮನ ತಣಿಸಿತು. ಬೆಳ್ಳಿ ಪಲ್ಲಕ್ಕಿಯಲ್ಲಿ ಮಹಿಷ ಮರ್ದಿನಿ ಅವತಾರದ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾಗೆ ವಿದ್ಯುಕ್ತ ಚಾಲನೆ ದೊರೆಯಿತು.

ವೇದಿಕೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟï, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರದ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ , ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಜಿ.ಟಿ.ದೇವೇಗೌಡ, ಎಲï.ನಾಗೇಂದ್ರ, ಎಸ್.ಎ.ರಾಮದಾಸ್, ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥï, ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮತ್ತಿತರರು ಉಪಸ್ಥಿತರಿದ್ದರು.

Articles You Might Like

Share This Article