ನವದೆಹಲಿ,ಏ.6- ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಚರ್ಚಾಸ್ಪದ ವಕ್ಫ್ ತಿದ್ದುಪಡಿ ಮಸೂದೆ-2025ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ನಿನ್ನೆ (ಶನಿವಾರ) ಅಂಕಿತ ಹಾಕಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಸಲಾನ್ ವಕ್ಫ್(ರದ್ದತಿ) ಮಸೂದೆ, 2025 ಕ್ಕೆ ಸಹ ತಮ ಒಪ್ಪಿಗೆ ನೀಡಿದ್ದಾರೆ. ಈ ಮೂಲಕ ಸಂಸತ್ತಿನ ಈ ಕಾಯ್ದೆಗೆ ಏಪ್ರಿಲ್ 5, 2025 ರಂದು ರಾಷ್ಟ್ರಪತಿಗಳ ಒಪ್ಪಿಗೆ ಸಿಕ್ಕಿದೆ.
ವಕ್‌್ಫ (ತಿದ್ದುಪಡಿ) ಕಾಯ್ದೆಯು ಏಪ್ರಿಲ್ 5, 2025ರಂದು ರಾಷ್ಟ್ರಪತಿಗಳ ಒಪ್ಪಿಗೆ ಪಡೆದಿದೆ. ಸಾಮಾನ್ಯ ಮಾಹಿತಿಗಾಗಿ ಇಲ್ಲಿ ಪ್ರಕಟಿಸಲಾಗಿದೆ. ವಕ್ಫ್ (ತಿದ್ದುಪಡಿ) ಕಾಯಿದೆ, 2025 ಎಂದು ಕೇಂದ್ರ ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.ಜೊತೆಗೆ, ರಾಷ್ಟ್ರಪತಿ ಮುರ್ಮು ಅವರು ಮುಸಲಾನ್ ವಕ್‌್ಫ (ಪುನರಾವರ್ತಿತ) ಮಸೂದೆ-2025ಕ್ಕೂ ಕೂಡ ತಮ ಒಪ್ಪಿಗೆ ನೀಡಿದ್ದಾರೆ.
ಮಸೂದೆಯು ಲೋಕಸಭೆಯಲ್ಲಿ ಅಂಗೀಕಾರವಾದ ಬಳಿಕ, ರಾಜ್ಯಸಭೆಯಲ್ಲಿ 13 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಚರ್ಚೆಯ ಬಳಿಕ ಶುಕ್ರವಾರ ಮುಂಜಾನೆ ಈ ಶಾಸನವು ಅನುಮೋದನೆಗೊಂಡಿತ್ತು. ಬಳಿಕ ಸಂಸತ್ತು ಮಸೂದೆಯನ್ನು ಅಂಗೀಕರಿಸಿತ್ತು. ಚರ್ಚೆಯಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.
ಮಸೂದೆಯನ್ನು ಮುಸ್ಲಿಂ ವಿರೋಧಿ ಮತ್ತು ಅಸಂವಿಧಾನಿಕ ಎಂದು ಟೀಕಿಸಿದ್ದರು. ಆದರೆ ಮಸೂದೆಯು ಐತಿಹಾಸಿಕ ಸುಧಾರಣೆ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ನೆರವಾಗಲಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿತ್ತು.
ಮಸೂದೆಗೆ ರಾಜ್ಯಸಭೆಯ 128 ಸದಸ್ಯರು ಪರ ಹಾಗೂ 95 ಸದಸ್ಯರು ವಿರೋಧಿಸಿ ಮತ ಚಲಾಯಿಸಿದ್ದರು. ಅದಕ್ಕೂ ಮುನ್ನ ಗುರುವಾರ ಮುಂಜಾನೆ ಲೋಕಸಭೆಯಲ್ಲಿ 288 ಸದಸ್ಯರು ಮಸೂದೆಗೆ ಬೆಂಬಲಿಸಿದರೆ, 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದ್ದರು.
13 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಚರ್ಚೆಯ ನಂತರ ರಾಜ್ಯಸಭೆಯು ವಿವಾದಾತಕ ಶಾಸನಕ್ಕೆ ಅನುಮೋದನೆ ನೀಡಿದ ನಂತರ ಕಳೆದ ಶುಕ್ರವಾರ ಮುಂಜಾನೆ ಸಂಸತ್ತು ಮಸೂದೆಯನ್ನು ಅಂಗೀಕರಿಸಿತ್ತು.
ವಕ್‌್ಫ ತಿದ್ದುಪಡಿ ಮಸೂದೆಗೆ ವಿರೋಧ ಪಕ್ಷಗಳಿಂದ ಮತ್ತು ಮುಸ್ಲಿಂ ಸಂಘಟನೆಗಳಿಂದ ತೀವ್ರ ಆಕ್ಷೇಪಣೆಗಳು ವ್ಯಕ್ತವಾಗಿದೆ. ಅವರು ಮಸೂದೆಯನ್ನು ಮುಸ್ಲಿಂ ವಿರೋಧಿ ಮತ್ತು ಅಸಂವಿಧಾನಿಕ ಎಂದು ಕರೆದಿದ್ದಾರೆ. ಸರ್ಕಾರವು ಇದನ್ನು ಐತಿಹಾಸಿಕ ಸುಧಾರಣೆ ಅಲ್ಪಸಂಖ್ಯಾತ ಸಮುದಾಯಕ್ಕೆ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳುತ್ತಿದೆ.
ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಪರವಾಗಿ 128 ಸದಸ್ಯರು ಮತ್ತು 95 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ಅದಕ್ಕೂ ಮುನ್ನ ಗುರುವಾರ ಮುಂಜಾನೆ ಲೋಕಸಭೆಯಲ್ಲಿ ಇದನ್ನು ಅಂಗೀಕರಿಸಲಾಯಿತು, 288 ಸದಸ್ಯರು ಪರವಾಗಿ ಮತ್ತು 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದ್ದರು.
ವಕ್‌್ಫ ತಿದ್ದುಪಡಿ ಮಸೂದೆ ಅಂಗೀಕರಿಸುವುದರ ಜೊತೆಗೆ ಸಂಸತ್ತು ಮುಸಲಾನ್ ವಕ್‌್ಫ (ರದ್ದತಿ) ಮಸೂದೆಯನ್ನು ಸಹ ಅನುಮೋದಿಸಿತು, ರಾಷ್ಟ್ರಪತಿಗಳು ತಮ ಒಪ್ಪಿಗೆಯನ್ನು ನೀಡಿದ ನಂತರ, ಮುಸಲಾನ್ ವಕ್ಫ್ ಕಾಯ್ದೆ, 1923 ನ್ನು ರದ್ದುಗೊಳಿಸಲಾಗಿದೆ.
ಕಾಂಗ್ರೆಸ್ ಸಂಸದ ಮೊಹಮದ್ ಜಾವೇದ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಸುಪ್ರೀಂ ಕೋರ್ಟ್‌ನಲ್ಲಿ ವಕ್‌್ಫ (ತಿದ್ದುಪಡಿ) ಮಸೂದೆಯ ಸಿಂಧುತ್ವವನ್ನು ಪ್ರಶ್ನಿಸಿ, ಇದು ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಕ್ರಮವನ್ನು ಒಂದು ಮಹತ್ವದ ಕ್ಷಣ ಎಂದು ಶ್ಲಾಘಿಸಿದ್ದು, ವಕ್ಫ್ ವ್ಯವಸ್ಥೆಯು ದೀರ್ಘಕಾಲದಿಂದ ಪಾರದರ್ಶಕತೆ ಮತ್ತು ಉತ್ತರದಾಯಿತ್ವದ ಕೊರತೆಯಿಂದ ಬಳಲುತ್ತಿದೆ ಎಂದು ಅವರು ಹೇಳಿದ್ದಾರೆ. ಈ ಶಾಸನವು ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಮತ್ತು ಜನರ ಹಕ್ಕುಗಳನ್ನು ರಕ್ಷಿಸುತ್ತದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್ ಮಾಡಿದ್ದಾರೆ.
ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳ ಸಲ್ಲಿಕೆ:
ವಕ್‌್ಫ (ತಿದ್ದುಪಡಿ) ಮಸೂದೆ ಮಸೂದೆಯ ಸಿಂಧುತ್ವವನ್ನು ಪ್ರಶ್ನಿಸಿ, ಕಾಂಗ್ರೆಸ್ ಸಂಸದ ಮೊಹಮದ್ ಜಾವೇದ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮಸೂದೆಯು ವಕ್ಫ್ ಆಸ್ತಿಗಳು ಮತ್ತು ಅವುಗಳ ನಿರ್ವಹಣೆಯ ಮೇಲೆ ಅನಿಯಂತ್ರಿತ ನಿರ್ಬಂಧ ವಿಧಿಸುತ್ತದೆ. ಹಾಗೂ ಮುಸ್ಲಿಂ ಸಮುದಾಯದ ಧಾರ್ಮಿಕ ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತದೆ ಎಂದು ಜಾವೇದ್ ತಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.
ವಕೀಲ ಅನಸ್ ತನ್ವೀರ್ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ಇತರ ಧಾರ್ಮಿಕ ದತ್ತಿಗಳ ಆಡಳಿತದಲ್ಲಿ ಇಲ್ಲದ ನಿರ್ಬಂಧಗಳನ್ನು ವಿಧಿಸುವ ಮೂಲಕ ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯ ಮಾಡಲಾಗಿದೆ ಎಂದು ಸಂಸದ ಮೊಹಮದ್ ಜಾವೇದ್ ಆರೋಪ ಮಾಡಿದ್ಧಾರೆ.
ವಕ್‌್ಫಗಳು ಮತ್ತು ಹಿಂದೂ, ಜೈನ ಮತ್ತು ಸಿಖ್ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳಿಗೆ ನೀಡಲಾಗಿದ್ದ ವಿವಿಧ ರಕ್ಷಣೆಗಳನ್ನು ಮಸೂದೆಯು ವಕ್ಫ್ ಗಳಿಂದ ಕಸಿದುಕೊಂಡಿದೆ ಎಂದು ಎಂದು ವಕೀಲ ಲಜಫೀರ್ ಅಹದ್ ಅವರು ಸಲ್ಲಿಸಿದ ಸಂಸದ ಓವೈಸಿ ಅವರ ಅರ್ಜಿಯಲ್ಲಿ ತಿಳಿಸಿದ್ದಾರೆ.
ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರು ಕೂಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮಸೂದೆಯು ಅಸಂವಿಧಾನಿಕ ಮತ್ತು ಸಂವಿಧಾನದ 14, 15, 21, 25, 26, 29, 30 ಮತ್ತು 300-ಎ ವಿಧಿಗಳ ಉಲ್ಲಂಘಿಸಿದೆ ಎಂದು ಘೋಷಿಸಬೇಕು ಮತ್ತು ಅದನ್ನು ರದ್ದುಗೊಳಿಸಲು ನಿರ್ದೇಶನ ನೀಡಬೇಕು ಎಂದು ಖಾನ್ ತಮ ಅರ್ಜಿಯಲ್ಲಿ ಕೋರಿದ್ದಾರೆ.
ಬಿಹಾರದ ಕಿಶನ್‌ಜಂಗ್‌ನ ಲೋಕಸಭಾ ಸಂಸದ ಜಾವೇದ್, ಮಸೂದೆಯ ಜಂಟಿ ಸಂಸದೀಯ ಸಮಿತಿಯ ಸದಸ್ಯರಾಗಿದ್ದರು. ಒಬ್ಬರ ಧಾರ್ಮಿಕ ಆಚರಣೆಯ ಅವಧಿಯನ್ನು ಆಧರಿಸಿ ವಕ್‌್ಫಗಳ ರಚನೆಯ ಮೇಲೆ ನಿರ್ಬಂಧಗಳನ್ನು ಪರಿಚಯಿಸುತ್ತದೆ ಎಂದು ಆರೋಪಿಸಿದ್ದಾರೆ.
ಓವೈಸಿ ಅವರ ಅರ್ಜಿಯಲ್ಲಿ, ಇತರ ಧರ್ಮಗಳ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳಿಗೆ ವಕ್‌್ಫಗಳನ್ನು ಉಳಿಸಿಕೊಂಡು ಅವರಿಗೆ ನೀಡಲಾದ ರಕ್ಷಣೆಯನ್ನು ಕಡಿಮೆ ಮಾಡುವುದು ಮುಸ್ಲಿಮರ ವಿರುದ್ಧದ ದ್ವೇಷಪೂರಿತ ತಾರತಮ್ಯವಾಗಿದೆ ಮತ್ತು ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುವ ಸಂವಿಧಾನದ 14 ಮತ್ತು 15 ನೇ ವಿಧಿಗಳ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.
ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರು ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅವರು ತಮ ಅರ್ಜಿಯಲ್ಲಿ, ಮಸೂದೆಯನ್ನು ಅಸಂವಿಧಾನಿಕ ಮತ್ತು ಸಂವಿಧಾನದ 14, 15, 21, 25, 26, 29, 30 ಮತ್ತು 300-ಎ ವಿಧಿಗಳನ್ನು ಉಲ್ಲಂಘಿಸುತ್ತದೆ ಎಂದು ಘೋಷಿಸಬೇಕು, ಅದನ್ನು ರದ್ದುಗೊಳಿಸಲು ನಿರ್ದೇಶನ ನೀಡಬೇಕು ಎಂದು ಕೋರಿದ್ದಾರೆ. ನಾಗರಿಕ ಹಕ್ಕುಗಳ ರಕ್ಷಣಾ ಸಂಘ ಎಂಬ ಸರ್ಕಾರೇತರ ಸಂಸ್ಥೆಯು ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ.