Monday, October 27, 2025
Homeರಾಷ್ಟ್ರೀಯ | Nationalಹಾವೇರಿ ಬಳಿ ಭೀಕರ ಅಪಘಾತ : ತೀವ್ರ ಸಂತಾಪ ವ್ಯಕ್ತಪಡಿಸಿದ ರಾಷ್ಟ್ರಪತಿ ಮುರ್ಮು

ಹಾವೇರಿ ಬಳಿ ಭೀಕರ ಅಪಘಾತ : ತೀವ್ರ ಸಂತಾಪ ವ್ಯಕ್ತಪಡಿಸಿದ ರಾಷ್ಟ್ರಪತಿ ಮುರ್ಮು

ನವದೆಹಲಿ,ಜೂ.28- ಕರ್ನಾಟಕದ ಹಾವೇರಿ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಘಟನೆಯ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. 13 ಮಂದಿ ಸಾವನ್ನಪ್ಪಿದ್ದು, ಮೃತರ ಆತಕ್ಕೆ ದೇವರು ಸದ್ಗತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

- Advertisement -

ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಇದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

- Advertisement -
RELATED ARTICLES

Latest News