ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿಧಿವಶ

ಬೆಂಗಳೂರು, ಸೆ.19-ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.ಕೆಲವು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್‌ ಆಗಿ ಮನೆಗೆ ಬಂದಿದ್ದ ಅವರು ವಿಶ್ರಾಂತಿ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ 10 ಗಂಟೆಯ ಸಂದರ್ಭದಲ್ಲಿ ಕೆಂಪಣ್ಣ ಅವರಿಗೆ ಎದೆನೋವು ಕಾಣಿಸಿಕೊಂಡು ಏಕಾಏಕಿ ಹೊಸಕೋಟೆ ಸಮೀಪದ ಜ್ಯೋತಿಪುರದಲ್ಲಿರುವ ಅವರ ಮನೆಯಲ್ಲಿ ಕುಸಿದು ಬಿದ್ದಿದ್ದಾರೆ. ಕುಟುಂಬ ಸದಸ್ಯರು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಮುಂದಾದರು. ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. … Continue reading ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿಧಿವಶ