ಆ.1ರಿಂದ ಮಾಲ್ಡೀವ್ಸ್ ಅಧ್ಯಕ್ಷರ ಭಾರತ ಭೇಟಿ

Social Share

ನವದೆಹಲಿ,ಜು.29-ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಅವರು ಆಗಸ್ಟ್ 1ರಿಂದ ನಾಲ್ಕು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಸಚಿವಾಲಯದ ಅಕೃತ ವಕ್ತಾರ ಅರಿಂದಮ್ ಬಾಗ್ಚಿ, ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ, ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರು ಆಗಸ್ಟ್ 1-4 ರವರೆಗೆ ಭಾರತಕ್ಕೆ ಅಕೃತ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಭೇಟಿ ವೇಳೆ ಸೋಲಿಹ್ ಅವರೊಂದಿಗೆ ಉನ್ನತ ಮಟ್ಟದ ಅಧಿಕಾರಿ ಮತ್ತು ವ್ಯಾಪಾರ ನಿಯೋಗ ಆಗಮಿಸುತ್ತಿದ್ದು, ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಅಧ್ಯಕ್ಷ ಸೋಲಿಹ್ ಅವರನ್ನು ಭೇಟಿ ಮಾಡುತ್ತಿದ್ದು, ನವದೆಹಲಿಯಲ್ಲಿ ಅಕೃತ ಕಾರ್ಯಕ್ರಮಗಳ ಜೊತೆಗೆ, ವ್ಯಾಪಾರ-ವಹಿವಾಟು ಸಂಬಂಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸೊಲಿಹ್ ಮುಂಬೈಗೆ ಭೇಟಿ ನೀಡುವರು.

ಅಧ್ಯಕ್ಷ ಸೋಲಿಹ್ ಅವರ ಮುಂಬರುವ ಭೇಟಿಯು ದೇಶದ ಪಾಲುದಾರಿಕೆಯಲ್ಲಿ ಮಾಡಿದ ಪ್ರಗತಿಯನ್ನು ಪರಿಶೀಲಿಸಲು ಅವಕಾಶ ಒದಗಿಸುತ್ತದೆ ಎಂದು ಬಾಗ್ಚಿ ಹೇಳಿದ್ದಾರೆ.

Articles You Might Like

Share This Article