Saturday, June 28, 2025
Homeರಾಷ್ಟ್ರೀಯ | Nationalದೇಶಿಯ ಉಕ್ಕು ಕ್ಷೇತ್ರದ ಅಭಿವೃದ್ಧಿಗೆ ಪ್ರಧಾನಿ ಮೋದಿ ದಿಟ್ಟ ಕ್ರಮ ಕೈಗೊಂಡಿದ್ದಾರೆ : ಹೆಚ್ಡಿಕೆ

ದೇಶಿಯ ಉಕ್ಕು ಕ್ಷೇತ್ರದ ಅಭಿವೃದ್ಧಿಗೆ ಪ್ರಧಾನಿ ಮೋದಿ ದಿಟ್ಟ ಕ್ರಮ ಕೈಗೊಂಡಿದ್ದಾರೆ : ಹೆಚ್ಡಿಕೆ

Prime Minister Modi has taken a bold step for the development of the domestic steel sector

ನವದೆಹಲಿ,ಏ. 22-ಉಕ್ಕು ಆಮದಿನ ಮೇಲೆ ಕೇಂದ್ರ ಸರ್ಕಾರ ಶೇ.12ರಷ್ಟು ಸುರಕ್ಷತಾ ಸುಂಕವನ್ನು ವಿಧಿಸಿರುವುದಕ್ಕೆ ಕೇಂದ್ರದ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ನಿರ್ಧಾರವನ್ನು ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಸ್ವಾಗತಿಸಿದ್ದು, ಆಮದು ಹೆಚ್ಚಳದ ಪ್ರತಿಕೂಲಕರ ಪರಿಣಾಮಗಳಿಂದ ದೇಶೀಯ ಉಕ್ಕು ತಯಾರಕರನ್ನು ರಕ್ಷಿಸಲು ಮತ್ತು ಮಾರುಕಟ್ಟೆಯಲ್ಲಿ ನ್ಯಾಯಯುತ ಸ್ಪರ್ಧೆಯನ್ನು ಖಾತ್ರಿಪಡಿಸಿಕೊಳ್ಳಲು ಈ ಕ್ರಮವು ಸಕಾಲಿಕ ಮತ್ತು ಅಗತ್ಯ ಕ್ರಮವಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶೀಯ ಉಕ್ಕು ಉದ್ಯಮದ ಹಿತರಕ್ಷಣೆ ನಿಟ್ಟಿನಲ್ಲಿ ಈ ಉಪಕ್ರಮವು ದೇಶೀಯ ಉಕ್ಕು ಉದ್ಯಮಕ್ಕೆ ಪ್ರೋತ್ಸಾಹದ ಜತೆಗೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದು ಅವರು ಹೇಳಿದ್ದಾರೆ.
ಮಿಶ್ರಲೋಹವಲ್ಲದ ಮತ್ತು ಮಿಶ್ರಲೋಹದ ಉಕ್ಕಿನಿಂದ ತಯಾರಿಸಿದ ಕೆಲವು ಉತ್ಪನ್ನಗಳ ಆಮದಿನ ಮೇಲೆ ಶೇ.12ರಷ್ಟು ಸುರಕ್ಷತಾ ಸುಂಕ ವಿಧಿಸುವ ನಿರ್ಧಾರವನು ಕೈಗೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ.

ಈ ಕ್ರಮವು ದೇಶೀಯ ಉತ್ಪಾದಕರಿಗೆ, ವಿಶೇಷವಾಗಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉಕ್ಕು ಉದ್ಯಮಗಳಿಗೆ ಅನುಕೂಲವಾಗಿದೆ ಹಾಗೂ ಹೆಚ್ಚುತ್ತಿರುವ ಆಮದುಗಳಿಂದ ಅಪಾರ ಒತ್ತಡವನ್ನು ಎದುರಿಸುತ್ತಿರುವವರಿಗೆ ನಿರ್ಣಾಯಕ ಪರಿಹಾರವನ್ನು ನೀಡುತ್ತದೆ. ಸುರಕ್ಷತಾ ಸುಂಕವು ಮಾರುಕಟ್ಟೆ ಸ್ಥಿರತೆಯನ್ನು ಸ್ಥಾಪಿಸಲು ಮತ್ತು ದೇಶೀಯ ಉದ್ಯಮದ ವಿಶ್ವಾಸವನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಆತನಿರ್ಭರ ಭಾರತ್‌ ಪರಿಕಲ್ಪನೆಯ ಅಡಿಯಲ್ಲಿ ದೇಶೀಯ ವ್ಯೂಹಾತಕ ವಲಯಗಳನ್ನು ಬಲಪಡಿಸುವಲ್ಲಿ ಇದು ಅತ್ಯುತ್ತಮ ಹೆಜ್ಜೆಯಾಗಿದೆ. ಅಲ್ಲದೆ, ಈ ನಿಟ್ಟಿನಲ್ಲಿ ಮೋದಿ ಅವರ ನಿರಂತರ ಬೆಂಬಲಕ್ಕಾಗಿ ನಾನು ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಭಾರತೀಯ ಉಕ್ಕು ವಲಯವು ಸುಸ್ಥಿರ, ಸ್ವಾವಲಂಬಿ ಮತ್ತು ಜಾಗತಿಕವಾಗಿ ಸ್ಪರ್ಧಾತಕವಾಗಿರುವುದನ್ನು ಖಚಿತಪಡಿಸಿಕೊಳ್ಳಲು ದೇಶೀಯ ವಲಯದಲ್ಲಿ ಸಚಿವಾಲಯವು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಮುಂದೆಯೂ ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

RELATED ARTICLES

Latest News