Thursday, November 21, 2024
Homeರಾಷ್ಟ್ರೀಯ | Nationalಪೋಲೆಂಡ್, ಉಕ್ರೇನ್‍ಗೆ ಮೋದಿ ಭೇಟಿ

ಪೋಲೆಂಡ್, ಉಕ್ರೇನ್‍ಗೆ ಮೋದಿ ಭೇಟಿ

ನವದೆಹಲಿ,ಆ.20- ಪ್ರದಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಪೋಲೆಂಡ್ ಭೇಟಿ ನೀಡಲಿದ್ದಾರೆ ಹಾಗೂ ಆ.23ರಂದು ಉಕ್ರೇನ್‍ಗೆ ತೆರಳಲಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ರಷ್ಯಾ ಪ್ರವಾಸದಿಂದ ಹಿಂತಿರುಗಿರುವ ಪ್ರಧಾನಿ ನರೇಂದ್ರ ಮೋದಿ ಆ. 21 ಮತ್ತು 22ರಂದು ಪೋಲೆಂಡ್‍ಗೆ ಭೇಟಿ ನೀಡಲಿದ್ದಾರೆ. ಅದಾದ ನಂತರ 23ರಂದು ಉಕ್ರೇನ್‍ಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

ಪೋಲೆಂಡ್ ಪ್ರಧಾನಿ ಡೊನಾಲ್ಡï ಟಸ್ಕ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಪೋಲೆಂಡ್‍ಗೆ ಭೇಟಿ ನೀಡಲಿದ್ದಾರೆ. 45 ವರ್ಷಗಳ ನಂತರ ಭಾರತದ ಪ್ರಧಾನಿ ಪೋಲೆಂಡ್‍ಗೆ ಭೇಟಿ ನೀಡುತ್ತಿರುವ ಕಾರಣ ಇದು ಮಹತ್ವದ ಭೇಟಿಯಾಗಿದೆ. ಹಾಗೇ, ಉಕ್ರೇನ್ ಅಧ್ಯಕ್ಷ ವ್ಲಾದಿಮೀರ್ ಝೆಲೆನ್ಸ್ಕಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆ.23ರಂದು ಉಕ್ರೇನ್‍ಗೆ ಅಧಿಕೃತ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಇದು ಒಂದು ಹೆಗ್ಗುರುತಾಗಿದೆ ಮತ್ತು ಐತಿಹಾಸಿಕ ಭೇಟಿಯಾಗಿದೆ. ನಾವು ನಮ್ಮ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ 40 ವರ್ಷಗಳ ನಂತರ ಭಾರತೀಯ ಪ್ರಧಾನಿಯೊಬ್ಬರು ಉಕ್ರೇನ್‍ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು.

ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಇಟಲಿಯಲ್ಲಿ ಝೆಲೆನ್ಸ್ಕಿಯನ್ನು ಭೇಟಿಯಾಗಿದ್ದರು. ಕಳೆದ ತಿಂಗಳು ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಮೋದಿ ಭೇಟಿ ಮಾಡಿದ್ದರು. ಉಕ್ರೇನ್ ಸಂಘರ್ಷದಲ್ಲಿ ಭಾರತದ ನಿಲುವನ್ನು ಭಾರತೀಯ ವಿದೇಶಾಂಗ ಸಚಿವಾಲಯ ಪುನರುಚ್ಚರಿಸಿತ್ತು.

RELATED ARTICLES

Latest News