Saturday, June 22, 2024
Homeರಾಷ್ಟ್ರೀಯಪ್ರಧಾನಿ ಮೋದಿ ಹ್ಯಾಟ್ರಿಕ್ ಗೆಲುವು 'ಗ್ಯಾರಂಟಿ'

ಪ್ರಧಾನಿ ಮೋದಿ ಹ್ಯಾಟ್ರಿಕ್ ಗೆಲುವು ‘ಗ್ಯಾರಂಟಿ’

ಬೆಂಗಳೂರು,ಜೂ.2– ಮತಗಟ್ಟೆ ಸಮೀಕ್ಷೆ ನಡೆಸಿದ ಎಲ್ಲಾ ಏಜೆನ್ಸಿಗಳಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ತ್ರಿವಿಕ್ರಮ ಸಾಧನೆಗೈಯುವುದು ಖಾತ್ರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.ತಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಎನ್‌ಡಿಎ ಮೈತ್ರಿಕೂಟ ಹ್ಯಾಟ್ರಿಕ್‌ ಗೆಲುವಿನೊಂದಿಗೆ ಮತ್ತೊಮೆ ಮೋದಿ ಜಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎನ್ನುವ ಸಮೀಕ್ಷಾ ವರದಿ ಬಹಿರಂಗವಾಗಿರುವುದು ಭಾರತವನ್ನು ಗೆಲ್ಲಿಸುವ ಸಂಕಲ್ಪ ತೊಟ್ಟಿದ್ದ ಮತದಾರ ಬಂಧುಗಳ ರಾಷ್ಟ್ರ ವಿಜಯವನ್ನು ಸಂಕೇತಿಸಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಕೆಲವು ರಾಜಕೀಯ ಪಂಡಿತರ ಲೆಕ್ಕಾಚಾರಗಳೆಲ್ಲಾ ತಲೆಕೆಳಗಾಗುವಂತೆ ಸಮೀಕ್ಷಾ ವರದಿಗಳು ನಮ ನಿರೀಕ್ಷಿತ ಫಲಿತಾಂಶದ ಸೂಚನೆ ಪ್ರಕಟಿಸಿವೆ. ಕರ್ನಾಟಕ ರಾಜ್ಯದ ಜನತೆ ಮೋದಿ ಅವರನ್ನು ಬೆಂಬಲಿಸುವ ನಿಟ್ಟಿನಲ್ಲಿ ಸದಾ ಮುಂದೆ ಎನ್ನುವ ವರದಿ ಬಿಜೆಪಿ ಕಾರ್ಯಕರ್ತರ ಪರಿಶ್ರಮದ ಹೋರಾಟಕ್ಕೆ ಸಾರ್ಥಕ ಭಾವ ಮೂಡಿಸಿದೆ ಎಂದಿದ್ದಾರೆ.

ಮತ ಬ್ಯಾಂಕ್‌ ಆಧಾರಿತ ಯೋಜನೆಗಳಿಗೆ ಮತದಾರ ಬಂಧುಗಳು ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ ಎನ್ನುವುದೂ ಸ್ಪಷ್ಟವಾಗಿದೆ. ಸಮಗ್ರ ಭಾರತದ ಸುರಕ್ಷತೆ ಹಾಗೂ ಅಭಿವೃದ್ಧಿಯ ವಿಷಯದಲ್ಲಿ ಕರ್ನಾಟಕದ ಮತದಾರರು ರಾಜಿಯಾಗುವ ಪ್ರಶ್ನೆಯೇ ಇಲ್ಲ ಎನ್ನುವುದನ್ನು ಈ ಎಕ್ಸಿಟ್‌ ಪೋಲ್‌ ವರದಿ ಸಾಕ್ಷೀಕರಿಸಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಜೂನ್‌ 4ರ ಫಲಿತಾಂಶ ಎಲ್ಲ ಸಮೀಕ್ಷೆಗಳನ್ನೂ ಮೀರಿ ಎನ್‌ಡಿಎ ಮೈತ್ರಿಕೂಟಕ್ಕೆ ನಮ ಸಂಕಲ್ಪದ ಗೆಲುವನ್ನು ತಂದುಕೊಡುತ್ತದೆ ಎಂಬ ಆತ್ಮವಿಶ್ವಾಸ ನಮದಾಗಿದೆ. ಇದಕ್ಕೆ ಕಾರಣರಾದ ಕರ್ನಾಟಕದ ಸಹೃದಯ ಮತದಾರ ಬಂಧುಗಳಿಗೆ ಹೃದಯ ತುಂಬಿ ಅಭಿನಂದಿಸುವೆ ಎಂದಿದ್ದಾರೆ.

RELATED ARTICLES

Latest News