Saturday, February 22, 2025
Homeರಾಷ್ಟ್ರೀಯ | Nationalರಾಜಸ್ಥಾನ ಸಿಎಂ ಕೊಲ್ಲುವುದಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯಿಂದ ಬೆದರಿಕೆ

ರಾಜಸ್ಥಾನ ಸಿಎಂ ಕೊಲ್ಲುವುದಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯಿಂದ ಬೆದರಿಕೆ

Prisoner threatens to kill Rajasthan CM Bhajanlal Sharma

ಜೈಪುರ, ಫೆ. 22: ರಾಜಸ್ಥಾನದ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರನ್ನು ಕೊಲ್ಲುವುದಾಗಿ ದೌಸಾದ ಸಲಾವಾಸ್ ಜೈಲಿನ ಕೈದಿಯೊಬ್ಬ ಬೆದರಿಕೆ ಹಾಕಿದ್ದಾನೆ.

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 29 ವರ್ಷದ ರಿಂಕು ಜೈಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಲಾವಾಸ್ ಜೈಲಿಗೆ ಕರೆ ಮಾಡಲು ಬಳಸಿದ ಮೊಬೈಲ್ ಫೋನ್‌ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಮುಂಜಾನೆ 3 ರಿಂದ 7 ರವರೆಗೆ ಜೈಲಿನಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಜೈಲಿನಿಂದ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News