ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರೇಕೆ ಹೆಗಲು ಮುಟ್ಟಿಕೊಳ್ಳುತ್ತಿದ್ದಾರೆ..? : ಪ್ರಿಯಾಂಕ್‌ ಖರ್ಗೆ

ಬೆಂಗಳೂರು,ಸೆ.2- ಕೋವಿಡ್‌ ಕಾಲದಲ್ಲಿ ನಡೆದ ಹಗರಣಗಳ ತನಿಖೆ ನಡೆಸಿದ ನ್ಯಾಯಾಂಗ ಆಯೋಗ ಮಧ್ಯಂತರ ವರದಿ ನೀಡುತ್ತಿದ್ದಂತೆ ಬಿಜೆಪಿಯವರು ನ್ಯಾಯಾಂಗ ಹೋರಾಟ ನಡೆಸುತ್ತೇವೆ ಎಂದು ಹೇಳಿಕೆ ನೀಡಿರುವುದು ಹಗರಣ ನಡೆದಿರುವುದನ್ನು ದೃಢಪಡಿಸಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವುದೇಕೆ? ಕೋವಿಡ್‌ ಹಗರಣದ ತನಿಖಾ ವರದಿ ಏನಿದೆ ಎಂದು ಗೊತ್ತಿಲ್ಲ. ವರದಿ ಸಲ್ಲಿಕೆಯಾದ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಕಾನೂನು ಹೋರಾಟ ಮಾಡುತ್ತೇವೆ ಎಂದಿದ್ದಾರೆ. … Continue reading ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರೇಕೆ ಹೆಗಲು ಮುಟ್ಟಿಕೊಳ್ಳುತ್ತಿದ್ದಾರೆ..? : ಪ್ರಿಯಾಂಕ್‌ ಖರ್ಗೆ