Friday, December 1, 2023
Homeರಾಜ್ಯಸಿಎಂ ಆಗಲು ನಾನೂ ರೆಡಿ : ಸಚಿವ ಪ್ರಿಯಾಂಕ್ ಖರ್ಗೆ

ಸಿಎಂ ಆಗಲು ನಾನೂ ರೆಡಿ : ಸಚಿವ ಪ್ರಿಯಾಂಕ್ ಖರ್ಗೆ

ಮೈಸೂರು,ನ.3- ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು ಎಂಬ ವಿಚಾರ ಇದು ಅವರ ವೈಯಕ್ತಿಕ ಹೇಳಿಕೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈ ಕಮಾಂಡ್ ಯಾರು ಸಿಎಂ ಆಗಬೇಕು, ಯಾರು ಮುಂದುವರೆಯಬೇಕು ಎಂಬುದನ್ನು ನಿರ್ಧರಿಸುತ್ತೆ ಎಂದರು.ಒಂದು ವೇಳೆ ಹೈ ಕಮಾಂಡ್ ನೀನು ಸಿಎಂ ಆಗು ಅಂದರೆ ನಾನೂ ಸಿದ್ದನಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು. ಜಿಲ್ಲಾ ಪಂಚಾಯ್ತಿ ಸದಸ್ಯರಿಂದ ಹಿಡಿದು ಶಾಸಕರವರೆಗೂ ತಮ್ಮ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ. ಇದರಲ್ಲಿ ತಪ್ಪು ಏನು ಇಲ್ಲ. ಆದರೆ, ಅವರ ಹೇಳಿಕೆ, ಕಲ್ಲಿನಲ್ಲಿ ಕೆತ್ತಿದ ಶಾಸನವಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್‍ಗೆ ಬಿಟ್ಟಿದ್ದು ಎಂದು ಪ್ರಿಯಾಂಕ ಖರ್ಗೆ ಮಾರ್ಮಿಕವಾಗಿ ನುಡಿದರು.

ಅಕ್ರಮವಾಗಿ ಅಮೆರಿಕ ಪ್ರವೇಶಿಸುತ್ತಿದ್ದಾಗ ಸಿಕ್ಕಿಬಿದ್ದ 96 ಸಾವಿರ ಭಾರತೀಯರು

ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ? :
ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಪಾರ್ಟಿಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು. ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ದ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರೂ ಸಿಗುತ್ತಿತ್ತು ಎಂದು ಅವರು ನುಡಿದರು.

ನಮಗೆ ಬಿಜೆಪಿಯಿಂದ ಪಾಠ ಕಲಿಯುವ ಅಗತ್ಯವಿಲ್ಲ. ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದಾರೆ. ಈಗ ಮಾತನಾಡಿದರೆ ಮಗನಿಗೆ ಸ್ಥಾನ ಸಿಗಬಹುದು ಎಂಬ ಕಾರಣಕ್ಕೆ ಮಾತನಾಡುತ್ತಿದ್ದಾರೆ ಎಂದರು.

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಎಲ್ಲರನ್ನೂ ಕತ್ತಲಲ್ಲಿಟ್ಟು ಮೈತ್ರಿ ಮಾಡಲಾಗಿದೆ. ಇದನ್ನು ಖುದ್ದು ಬಿಜೆಪಿಯ ರೇಣುಕಾಚಾರ್ಯ ಹೇಳಿದ್ದಾರೆ. ಬಿಜೆಪಿಯವರು ತಮ್ಮದನ್ನು ತಾವು ನೋಡಿಕೊಳ್ಳಲಿ. ಕಾಂಗ್ರೆಸ್ ನ ಚಿಂತೆ ಅವರಿಗೆ ಬೇಡ ಎಂದು ಖಡಕ್ಕಾಗಿ ನುಡಿದರು. ನಮ್ಮ ಆದ್ಯತೆ ಐದು ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡುವುದಾಗಿದೆ ಎಂದು ಅವರು ತಿಳಿಸಿದರು.

RELATED ARTICLES

Latest News