ನವದೆಹಲಿ, ಆ.10- ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕೋವಿಡ್ ಸೋಂಕಿಗೆ ಸಿಲುಕಿದ್ದಾರೆ.ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ ಗಾಂಧಿ ವಾದ್ರಾ, ಪರೀಕ್ಷೆಯಲ್ಲಿ ನನಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ.
ಮಾರ್ಗಸೂಚಿಯನ್ನು ಪಾಲಿಸಿ, ಮನೆಯಲ್ಲೇ ಪ್ರತ್ಯೇಕವಾಗಿ ವಾಸಿಸುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದಿದ್ದಾರೆ. ಕಳೆದ ವರ್ಷದ ಜೂನ್‍ನಲ್ಲೂ ಪ್ರಿಯಾಂಕ ಗಾಂಧಿ ಅವರಿಗೆ ಸೋಂಕು ತಗುಲಿತ್ತು. ಈಗ ಮತ್ತೆ ಎರಡನೇ ಬಾರಿ ಸೋಂಕು ತಗುಲಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಿನ್ನೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ. ಖರ್ಗೆ ಅವರು ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಕಾಂಗ್ರೆಸ್‍ನ ಸಂವಹನ ವಿಭಾಗದ ಮುಖಂಡರಾದ ಪವನ್ ಖೇರಾ ಮತ್ತು ಅಭಿಷೇಕ್ ಮನು ಸಿಂಘ್ವಿ ಅವರಿಗೂ ಕೋವಿಡ್ ಸೋಂಕು ಖಚಿತವಾಗಿದೆ.