ಉತ್ತರಪ್ರದೇಶ,ಮಾ.10- ಹತ್ತಾರು ಭರವಸೆ ನೀಡಿ ಅಧಿಕಾರ ಪಡೆಯುವ ಕನಸು ಕಂಡಿದ್ದ ಕಾಂಗ್ರೆಸ್‍ಗೆ ಉತ್ತರ ಪ್ರದೇಶದಲ್ಲಿ ಭಾರೀ ಮುಖಭಂಗವಾಗಿದೆ. ಉತ್ತರ ಪ್ರದೇಶದ ಚುನಾವಣೆ ನೇತೃತ್ವ ವಹಿಸಿದ್ದ ಪ್ರಿಯಾಂಕವಾದ್ರಾ ಸುಮಾರು 500ಕ್ಕೂ ಹೆಚ್ಚು ಅಧಿಕ ಸಭೆ, ವಿಡಿಯೋ ಕಾನರೆನ್ಸ್, ರೋಡ್ ಶೋಗಳಲ್ಲಿ ಭಾಗವಹಿಸಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದರು.
ಜತೆಗೆ ಅಭ್ಯರ್ಥಿಗಳ ಪಟ್ಟಿಯಲ್ಲಿ ಶೇ.50ಕ್ಕೂ ಹೆಚ್ಚು ಮಹಿಳೆಯರಿಗೆ ಆದ್ಯತೆ ನೀಡಿದ್ದರು. ಮಹಿಳೆಯರಲ್ಲಿ ಹೊಸ ಸಂಚಲನ ಉಂಟು ಮಾಡಿದ್ದರು. ಆದರೆ, ಅವರು ತೆಗೆದುಕೊಂಡಿದ್ದ ಯಾವುದೇ ನಿರ್ಧಾರ ಕೂಡ ಯಶಸ್ವಿಯಾಗಿಲ್ಲ. ಹೀಗಾಗಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ನೆಲಕಚ್ಚಿದೆ.
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದ ಮತದಾರ ಪ್ರಭುಗಳ ನಾಡಿಮಿಡಿತವನ್ನು ಅರಿತುಕೊಳ್ಳುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್‍ನ ಯುವ ನಾಯಕಿ ಪ್ರಿಯಾಂಕ ವಾದ್ರಾ ಮಾಡಿದ ಯಾವುದೇ ಪ್ರಯೋಗಗಳು ಕೂಡ ಇಲ್ಲಿ ಯಶಸ್ವಿಯಾಗಿಲ್ಲ. ಕಳೆದ ಬಾರಿ ಚುನಾವಣೆಯಲ್ಲೂ ಕೂಡ ಕಾಂಗ್ರೆಸ್ ಹೀನಾಯವಾಗಿ ಸೋಲನ್ನಪ್ಪಿತ್ತು. ಈ ಬಾರಿಯೂ ಕೂಡ ಬಹಳ ಹೀನಾಯವಾಗಿ ಸೋಲನ್ನಪ್ಪಿದೆ.
2017ರಿಂದ ಉತ್ತರ ಪ್ರದೇಶದ ಸಿಎಂ ಆಗಿ ಅಕಾರ ನಡೆಸುತ್ತಿರುವ ಯೋಗಿ ಆದಿತ್ಯನಾಥ್ ಅವರಿಗೆ ಅಲ್ಲಿನ ಜನ ಮತ್ತೆ ಮಣೆಹಾಕಿದ್ದಾರೆ. ಉತ್ತರ ಪ್ರದೇಶದ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ತೊರೆದು ಅನೇಕರು ಸಮಾಜವಾದಿ ಪಕ್ಷ ಸೇರಿಕೊಂಡಿದ್ದರು. ಅಖಿಲೇಶ್ ಯಾದವ್ ನೇತೃತ್ವದ ಎಸ್ಪಿ ಅಕಾರದ ಚುಕ್ಕಾಣಿ ಹಿಡಿಯುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಮತದಾರರು ಎಲ್ಲಾ ಲೆಕ್ಕಾಚಾರವನ್ನು ತಲೆಕೆಳಗೆ ಆಗುವಂತೆ ಮಾಡಿದ್ದಾರೆ.
