ಸುಳ್ಳು ಜಾಹಿರಾತುಗಳಿಂದ ಕಾನೂನು ಸುವ್ಯವಸ್ಥೆ ಸುಧಾರಿಸಲ್ಲ : ಪ್ರಿಯಾಂಕ ವಾದ್ರಾ

Social Share

ಲಖ್ನೋ,ಸೆ.15- ಪ್ರತಿದಿನ ಪತ್ರಿಕೆಗಳು ಮತ್ತು ದೂರದರ್ಶನಗಳಲ್ಲಿ ಸುಳ್ಳು ಜಾಹೀರಾತುಗಳನ್ನು ನೀಡುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸುವುದಿಲ್ಲ. ಅಷ್ಟಕ್ಕೂ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ಘೋರ ಅಪರಾಧಗಳು ಏಕೆ ಹೆಚ್ಚುತ್ತಿವೆ? ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಯೋಗಿ ಆದಿತ್ಯನಾಥ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಲಖಿಂಪುರ ಖೇರಿಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಅಪ್ರಾಪ್ತೆ ಸಹೋದರಿಯ ಮೃತ ದೇಹ ಪತ್ತೆಯಾದ ವರದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಹೆಣ್ಣುಮಕ್ಕಳ ಮೇಲೆಯೇ ಘೋರ ಅಪರಾಧಗಳು ಸಂಭವಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-09-2022)

ಇಬ್ಬರು ಬಾಲಕಿಯರು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಹಗಲು ಹೊತ್ತಿನಲ್ಲಿ ಬಾಲಕಿಯರನ್ನು ಅಪಹರಿಸಲಾಗಿದೆ ಎಂದು ಸಂಬಂಧಿಕರು ಹೇಳುತ್ತಿದ್ದಾರೆ. ಇಬ್ಬರು ಸಹೋದರಿಯರ ಹತ್ಯೆ ಹೃದಯ ವಿದ್ರಾವಕವಾದದ್ದು ಎಂದು ಟ್ವೀಟ್ ಮಾಡಿದ್ದಾರೆ.

ಟ್ವಿಟರ್‍ನಲ್ಲಿ ಮಾಧ್ಯಮಗಳ ವರದಿಯನ್ನು ಹಂಚಿಕೊಂಡಿದ್ದು, ಹುಡುಗಿಯರ ಶವಗಳನ್ನು ಮೂವರು ಪುರುಷರು ಅಪಹರಿಸಿದ ನಂತರ ಮರಕ್ಕೆ ನೇಣು ಹಾಕಿರುವುದು ಕಂಡುಬಂದಿದೆ. ಸರ್ಕಾರ ಯಾವಾಗ ಎಚ್ಚೆತ್ತುಕೊಳ್ಳುತ್ತದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Articles You Might Like

Share This Article