Thursday, December 12, 2024
Homeರಾಜ್ಯಕನ್ನಡ ಹೋರಾಟಗಾರರ ಬಂಧನದಿಂದ ದುಃಖವಾಗಿದೆ: ಬೊಮ್ಮಾಯಿ

ಕನ್ನಡ ಹೋರಾಟಗಾರರ ಬಂಧನದಿಂದ ದುಃಖವಾಗಿದೆ: ಬೊಮ್ಮಾಯಿ

ಬೆಂಗಳೂರು, ಡಿ.29- ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕನ್ನಡ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಃಖವಾಗಿದ್ದು, ಕನ್ನಡ ಹೋರಾಟಗಾರರನ್ನು ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ಸುಮಾರು
ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೆವು. ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.

ಯಾವ ನಾಡಿನಲ್ಲಿ ಕಾನೂನು ಅನುಷ್ಠಾನ ಮಾಡುವ ವ್ಯವಸ್ಥೆ ಇರುತ್ತದೆಯೋ ಅಲ್ಲಿ ಈ ರೀತಿಯ ಪ್ರತಿಭಟನೆಗಳು ನಡೆಯುವುದಿಲ್ಲ. ಕನ್ನಡದ ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ತು ಸಾಕಷ್ಟು ಶ್ರಮ ಹಾಕಿದೆ. ಕನ್ನಡ ನಿತ್ಯ ನಿರಂತರವಾಗಿರಬೇಕೆಂದರೆ ಕನ್ನಡಿಗರು ಜಾಗೃತರಾಗಿರಬೇಕು ಎಂದರು.

‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ

ಕುವೆಂಪು ವಿಶ್ವಮಾನವ: ಕುವೆಂಪು ಅವರು ಅಪರೂಪದ ವ್ಯಕ್ತಿತ್ವ. ಒಂದು ರೀತಿಯಲ್ಲಿ ಅವರು ಯುಗಪುರುಷರು ಅಂತ ಹೇಳಲು ಬಯಸುತ್ತೇನೆ. ಅವರನ್ನು ಆಳವಾಗಿ ನೋಡಿದಾಗ ಅತ್ಯಂತ ಮಾನವೀಯ ಗುಣಗಳಿರುವ ವ್ಯಕ್ತಿ. ವಿಸ್ತಾರವಾಗಿ ನೋಡಿದಾಗ ವಿಶ್ವ ಮಾನವರಾಗಿ ಕಾಣುತ್ತಾರೆ ಎಂದು ಗುಣಗಾನ ಮಾಡಿದರು.

ವೈಚಾರಿಕತೆಯಲ್ಲಿ ಅವರು ಜಗಜ್ಯೋತಿ ಬಸವಣ್ಣನವರ ವಿಚಾರಗಳನ್ನು ವಿಮರ್ಶೆ ಮಾಡಿದ್ದಾರೆ. ಎಲ್ಲಿ ನೋಡಿದರೂ ಅವರ ಚಿಂತನೆ ಮತ್ತು ಸಾಹಿತ್ಯ ಇದೆ. ಹೀಗಾಗಿ ಈಗಲೂ ಕುವೆಂಪು ಜೀವಂತವಾಗಿದ್ದಾರೆ. ಅವರ ಸಾಹಿತ್ಯದಲ್ಲಿ ಎಲ್ಲದಕ್ಕೂ ಪರಿಹಾರ ಇದೆ. ಎಲ್ಲವನ್ನೂ ಸ್ವೀಕರಿಸುವ ಗುಣ ಅವರಿಗೆ ಇದ್ದಿದ್ದರಿಂದ ಕುವೆಂಪು ವಿಶ್ವ ಮಾನವರಾಗಲು ಕಾರಣವಾಯಿತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಹಾಗೂ ಮತ್ತಿತರರು ಹಾಜರಿದ್ದರು.

RELATED ARTICLES

Latest News