Friday, May 3, 2024
Homeರಾಜ್ಯಪಾಕ್ ಪರ ಘೋಷಣೆ ಕೂಗಿದ್ದ ಆರೋಪಿ ನಾಶಿಪುಡಿಗೆ 2 ವಾರ ನ್ಯಾಯಾಂಗ ಬಂಧನ

ಪಾಕ್ ಪರ ಘೋಷಣೆ ಕೂಗಿದ್ದ ಆರೋಪಿ ನಾಶಿಪುಡಿಗೆ 2 ವಾರ ನ್ಯಾಯಾಂಗ ಬಂಧನ

ಬೆಂಗಳೂರು,ಮಾ.7- ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮೊಹಮ್ಮದ್ ಶಫಿ ನಾಶಿಪುಡಿ ಅವರನ್ನು 2 ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪಾಕ್ ಪರ ಘೋಷಣೆ ಕೂಗಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮೊಹಮ್ಮದ್ ಶಫಿ ನಾಶಿಪುಡಿ ಅವರ ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾೀಧಿಶರ ಮುಂದೆ ಹಾಜರುಪಡಿಸಿದರು. 39ನೇ ಎಸಿಎಂಎಂ ನ್ಯಾಯಾಲಯ ನಾಶಿಪುಡಿ ಅವರನ್ನು ಎರಡು ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು.

ಫೆ.27ರಂದು ನಡೆದ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ನಾಸಿರ್ ಹುಸೇನ್ ವಿಜಯೋತ್ಸವ ಸಂದರ್ಭದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಆರೋಪ ಪ್ರಕರಣದಲ್ಲಿ ಮೊಹಮ್ಮದ್ ಶಫಿ ನಾಶಿಪುಡಿ, ಮುನ್ನಾವರ್ ಅಹಮ್ಮದ್, ಮೊಹಮ್ಮದ್ ಇಲ್ತಾಜ್ ಎಂಬುವರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದರು. ಈ ಮೂವರು ಆರೋಪಿಗಳನ್ನು ನ್ಯಾಯಾೀಧಿಶರ ಮುಂದೆ ಹಾಜರುಪಡಿಸಲಾಗಿತ್ತು. ಹೆಚ್ಚುವರಿ ವಿಚಾರಣೆಗಾಗಿ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.

ಇಬ್ಬರು ಆರೋಪಿಗಳಾದ ಮುನ್ನಾವರ್ ಅಹಮ್ಮದ್ ಇಲ್ತಾಜ್ ಅವರನ್ನು ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಹೆಚ್ಚುವರಿ ವಿಚಾರಣೆಗಾಗಿ ನಾಶಿಪುಡಿ ಅವರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸ್ ವಶಕ್ಕೆ ನೀಡಲಾಗಿತ್ತು. ಇಂದಿಗೆ ಪೊಲೀಸ್ ಕಸ್ಟಡಿಯ ಅವಧಿ ಮುಗಿದ ಕಾರಣ ನ್ಯಾಯಾಲಯದಲ್ಲಿ ಹಾಜರುಪಡಿಸಿದಾಗ ನ್ಯಾಯಾೀಧಿಶರು ನಾಶಿಪುಡಿ ಅವರಿಗೆ 2 ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದರು.

RELATED ARTICLES

Latest News