ಬೆಳಗಾವಿ,ಡಿ.19-ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಕೊಲ್ಲಾಪುರ ಸಂಸದ ಧೈರ್ಯಶೀಲ ಮಾನೆ ಅವರಿಗೆ ಬೆಳಗಾವಿ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಕಾರಿ ನಿತೇಶ್ ಪಾಟೀಲ್ ನಿಷೇದಾಜ್ಞೆ ಹೊರಡಿಸಿದ್ದಾರೆ.
ಸಿಆರ್ಪಿಸಿ ಕಲಂ 144(3)ಅನ್ವಯ ಜಿಲ್ಲಾಕಾರಿಗಳು ಇದೀಗ ನಿಷೇಧ ಹೇರಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು, ಜನರ ಆಸ್ತಿಪಾಸ್ತಿ ಹಾನಿ ತಪ್ಪಿಸುವ ಉದ್ದೇಶದಿಂದ ಈ ಸಿಆರ್ಪಿಸಿ ಅನ್ವಯವಾಗಲಿದೆ.
ಕತಾರ್ ವಿಶ್ವಕಪ್ನಲ್ಲಿ ಅತಿ ಹೆಚ್ಚು ಗೋಲು, ಹೊಸ ದಾಖಲೆ
ಬೆಳಗಾವಿಯಲ್ಲಿ ಇಂದಿನಿಂದ ಕರ್ನಾಟಕ ವಿಧಾನಮಂಡಲದ ವಿಶೇಷ ಅವೇಶನ ಆರಂಭವಾಗಲಿದೆ. ಅಂದೇ ಮಹಾರಾಷ್ಟ್ರ ಏಕೀಕರಣ ಸಮಿತಿ ಅವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ ನಡೆಸುತ್ತದೆ.
ಈ ಕಾರ್ಯಕ್ರಮಕ್ಕೆ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ಆಗಮಿಸಿ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರ ಬೆಳಗಾವಿ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ.
#DistrictAuthorities, #DhairyasheelMane, #prohibit, #entry, #ShivSena, #Karnataka, #Belagavi, #protest,