ಬೆಂಗಳೂರು,ಆ.29- ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಆರ್ಥಿಕ ನೆರವು ಸೇರಿದಂತೆ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ವಿಧಾನಸೌಧಧ ಬಾಂಕ್ವೆಟ್ ಹಾಲ್‍ನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಥಾನ್‍ಗೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸುವುದು ಎಲ್ಲ ಸರ್ಕಾರಗಳ ಆದ್ಯಕರ್ತವ್ಯ. ಈ ಹಂತದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಸಿಕ್ಕರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ರ್ಪಧಿಸಲು ಸಹಾಯಕವಾಗುತ್ತದೆ. ಹೀಗಾಗಿ ನಮ್ಮ ಸರ್ಕಾರ ಎಲ್ಲ ರೀತಿಯ ನೆರವು ನೀಡಲು ಸಿದ್ದವಿದೆ ಎಂದು ಅಭಯ ನೀಡಿದರು.
ನಮ್ಮ ಸರ್ಕಾರ ಅತಿ ಹೆಚ್ಚಿನ ಪ್ರೋತ್ಸಾಹ ಕೊಟ್ಟಿದೆ. ಬಜೆಟ್‍ನಲ್ಲಿ ನಾನು ಇದಕ್ಕಾಗಿ ವಿಶೇಷ ಅನುದಾನವನ್ನು ಸಹ ಒದಗಿಸಿದ್ದೇನೆ. ಒಲಿಂಪಿಕ್ ಹಾಗೂ ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ಪ್ರೋತ್ಸಾಹ ಧನ ನೀಡಲಾಗಿದೆ ಎಂದರು.
ಪದಕ ಗೆದ್ದವರು ಮಾತ್ರ ಶ್ರೇಷ್ಠರು ಉಳಿದವರು ಶ್ರೇಷ್ಟರಲ್ಲ ಎಂಬ ಭಾವನೆ ಬೇಡ. ಕ್ರೀಡೆಯಲ್ಲಿ ಪ್ರತಿಯೊಬ್ಬರು ಸೋಲುಗೆಲುವುಗಳನ್ನುಸ ಸಮಾನಾಗಿ ತೆಗೆದುಕೊಂಡಾಗ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಕ್ರೀಡೆಯನ್ನು ಸ್ಪರ್ಧಾತ್ಮಕ ಮನೋಭಾವದಿಂದ ತೆಗೆದುಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಪದಕ ಗೆದ್ದ ಕ್ರೀಡಾಪಟುಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡಬೇಕೆಂದು ಮನವಿ ಮಾಡಲಾಗಿತ್ತು. ಅದರಂತೆ ಸರ್ಕಾರ ಪ್ರೋತ್ಸಾಹ ಕೊಟ್ಟಿದೆ. ಇದನ್ನು ಸದುಪಯೋಗಪಡಿಸಿಕೊಂಡು ಮುಂದೆ ಬರಬೇಕೆಂದು ಸಲಹೆ ಮಾಡಿದರು.
ಮುಂದಿನ 30 ವರ್ಷದ ಯುವಕರಲ್ಲಿ ಡಿಸಿಪಿನ್ ಬರಬೇಕು, ಆಗ ಯಶಸ್ವಿಯಾಗಲು ಸಾಧ್ಯ. ಪ್ರಯತ್ನ ಕಠಿಣ ಪರಿಶ್ರಮ ಅಗತ್ಯವಿದೆ. ಸೋಲಬಾರದು ಎಂದು, ಗೆಲ್ಲಬೇಕು, ಎಂದು ಎಲ್ಲಾ ಶಕ್ತಿ ಮೀರಿ ಪ್ರಯತ್ನ ಮಾಡಿದಾಗ ಯಶಸ್ವಿ ಯಾಗಲು ಸಾಧ್ಯ. ಕೆಲಸ ಮಾಡಬೇಕು ಎಂದು ಇಚ್ಛಾಶಕ್ತಿ ಮನಸ್ಸಿನ ಬಂದಾಗ ಆ ಕೆಲಸ ಯಶಸ್ವಿಯಾಗುತ್ತದೆ ಎಂದರು.
ಕ್ರೀಡೆಗಳಿಗೆ ಪ್ರೋತ್ಸಾಹ ಕೊಡಲು ನಮ್ಮ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ ವಿದೇಶಗಳಲ್ಲಿ ತರಬೇತಿ ನಾಲ್ಕು ವರ್ಷ, ತರಬೇತಿ, ದೇಶ ಕಳುಹಿಸಿ ತರಬೇತಿ ನೀಡಲಾಗುವುದು ಎಂದರು. ನಮ್ಮ ಮಣ್ಣಿನಲ್ಲಿ ಕ್ರೀಡಾ ಸಾಧನೆ ಆಗಬೇಕು. ನಮ್ಮ ಗ್ರಾಮೀಣ ಕ್ರೀಡೆ ಕಬ್ಬಡಿ, ಕೋಕೋ, ಎತ್ತಿನಸಂದೆ, ಪ್ರೋತ್ಸಹ ನೀಡಲಾಗುವುದು. ಇದೇ ವರ್ಷ ಅರಂಭ ಮಾಡಿದ್ದಾರೆ. ಗ್ರಾಮಪಂಚಾಯತ್‍ಜಿಲ್ಲೆಯ, ರಾಜ್ಯದಲ್ಲಿ ನಡೆಯುತ್ತಿದೆ. ಯುವ ಪ್ರತಿಭೆ ಹುಡುಕುವ ಕೆಲಸಮಾಡಲಾಗುತ್ತಿದೆ ಎಂದು ಹೇಳಿದರು.
30 ಜನರನ್ನು, ಸಂಘವನ್ನು ಗುರುತಿಸಿ, 3.5ರಿಂದ 10 ಲಕ್ಷ ನೀಡಲಾಗುತ್ತಿದೆ. 5 ಲಕ್ಷ ಯುವಕರಿಗೆ ಉದ್ಯೋಗ ಕೊಡುವ ಯೋಜನೆ ಮಾಡಲಾಗಿದೆ. ಆರ್ಥಿಕ ದೈಹಿಕ ಪ್ರಾಬಲ್ಯ ನೀಡಲಾಗುವುದು ಎಂದರು. ವಿಶೇಷ ಕ್ರೀಡೆ ,ಕಂಬಳ, ಚಕಂಡಿ ಓಡಿಸುವ ಸ್ಪರ್ಧೆ, ಜಿಲ್ಲೆಗೊಂದು ಕ್ರೀಡೆ ಇದೆ. ಹೀಗೆ ನಿರಂತರ ಕೆಲಸ ಮಾಡುತ್ತಿದೆ. ಕ್ರೀಡಾಪಟುಗಳಿಗೆ ಉದ್ಯೋಗ ಅವಕಾಶ ನೀಡಲಾಗುತ್ತಿದೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ .ನಾರಾಯಣಗೌಡ ಮಾತನಾಡಿ,ಕರ್ನಾಟಕದಲ್ಲಿ ಕ್ರೀಡೆಯ ಸಮಗ್ರ ಅಭಿವೃದ್ಧಿಗೆ, ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲು ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದರು.
ನಮ್ಮ ಸರ್ಕಾರ ಕ್ರೀಡೆಗೆ, ಕ್ರೀಡಾಪಟುಗಳಿಗೆ ಸಾಕಷ್ಟು ಉತ್ತೇಜನ, ಪ್ರೋತ್ಸಾಹ ನೀಡುತ್ತಿದೆ. ಇಂದು ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ ನೀಡುವ ಮೂಲಕ ಗ್ರಾಮೀಣ ಮಟ್ಟದಿಂದಲೂ ಕ್ರೀಡಾಪಟುಗಳು ಗುರುತಿಸಿ, ಅವರಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡುತ್ತಿದ್ದೇವೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಸೂಚನೆಯಂತೆ ಗ್ರಾಮ ಪಂಚಾಯತ್ ಮಟ್ಟದಿಂದ ರಾಜ್ಯಮಟ್ಟದವರೆಗೂ ದೇಸಿ ಕ್ರೀಡೆಗಳಾದ ಕುಸ್ತಿ, ಕಬ್ಬಡ್ಡಿ, ಖೋಖೋ ಮತ್ತು ಎತ್ತಿನಬಂಡಿ ಸ್ಪರ್ಧೆ ಆಯೋಜಿಸಲಾಗುತ್ತಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು.
15 ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ, 14 ಕ್ರೀಡಾಪಟುಗಳಿಗೆ ಕ್ರೀಡಾರತ್ನ ಪ್ರಶಸ್ತಿ, 05 ಜನರಿಗೆ ಜೀವಮಾನ ಸಾಧನೆ ಪ್ರಶಸ್ತಿ, 10 ಸಂಸ್ಥೆಗಳಿಗೆ ಕ್ರೀಡಾ ಪೋಷಕ ಪ್ರಶಸ್ತಿ, ಸಹಸ್ರ ಕ್ರೀಡಾ ಪ್ರತಿಭಾ ಪುರಸ್ಕಾರ ಯೋಜನೆಯಡಿ 750 ಯುವ ಕ್ರೀಡಾಪಟುಗಳಿಗೆ ತಲಾ ಒಂದು ಲಕ್ಷ ನಗದು ಪುರಸ್ಕಾರ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಸಚಿವ ಡಾ.ನಾರಾಯಣಗೌಡ ಅವರು ಗೌರವಿಸಿದರು.
ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯುಕ್ತ ಗೋಪಾಲಕೃಷ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.