ಭಟ್ಕಳ, ಫೆ.25- ಆಸ್ತಿ ವಿವಾದದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದಲ್ಲಿ ನಡೆದಿದೆ. ಶಂಭುಭಟ್ (65), ಪತ್ನಿ ಮಹದೇವಿ ಭಟ್ (60), ಪುತ್ರ ರಾಜೀವ್ ಭಟ್ (34) ಹಾಗೂ ಪತ್ನಿ ಕುಸುಮಾ ಭಟ್ (30) ಕೊಲೆಯಾದ ದುರ್ದೈವಿಗಳು.
ಕಳೆದ ರಾತ್ರಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸಂಬಂಧಿಕರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಕತ್ತಿಯಿಂದ ನಾಲ್ವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಕನ್ನಡಿಗ ಕೆ.ಎಲ್.ರಾಹುಲ್ ನೆರವಿಗೆ ಬಂದ ಗಂಭೀರ್
ಮನೆ ಸಮೀಪ ರಕ್ತ ಚಲ್ಲಾಡಿದ್ದು, ಶವಗಳು ಕೂಡ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ದೃಶ್ಯ ಭೀಕರವಾಗಿತ್ತು.
ಭಟ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಶವಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಹಿರಿಯ ಪುತ್ರ ಶ್ರೀಧರ್‍ಭಟ್‍ನ ಪತ್ನಿ ಕುಟುಂಬದವರು ಈ ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಮಾದಕ ವ್ಯಸನದಿಂದ ದೂರವಿರುವಂತೆ ಕಾಂಗ್ರೆಸ್ ಸದಸ್ಯರಿಗೆ ಸೂಚನೆ
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಧರ್‍ಭಟ್ ಇತ್ತೀಚೆಗೆ ಮೃತಪಟ್ಟಿದ್ದು, ಅವರ ಪತ್ನಿ ವಿದ್ಯಾಭಟ್ ಕುಟುಂಬದವರು ಆಸ್ತಿ ಭಾಗ ಮಾಡುವ ವಿಚಾರದಲ್ಲಿ ಆಗಾಗ ಗಲಾಟೆ ನಡೆಸುತ್ತಿದ್ದರು ಎಂದು ಹೇಳಲಾಗುತ್ತಿದೆ.
ಈಗಾಗಲೇ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಈ ಭೀಕರ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
property, dispute, family, four members, murder, bhatkal,