Thursday, March 13, 2025
Homeರಾಜ್ಯ7 ಸರ್ಕಾರಿ ಪಿಯು ಕಾಲೇಜು ಆರಂಭಕ್ಕೆ ಪ್ರಸ್ತಾವ : ಮಧು ಬಂಗಾರಪ್ಪ

7 ಸರ್ಕಾರಿ ಪಿಯು ಕಾಲೇಜು ಆರಂಭಕ್ಕೆ ಪ್ರಸ್ತಾವ : ಮಧು ಬಂಗಾರಪ್ಪ

Proposal to start 7 government PU colleges: Madhu Bangarappa

ಬೆಂಗಳೂರು, ಮಾ.13– ರಾಜ್ಯದ ವಿವಿಧ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ 7 ಸರ್ಕಾರಿ ಪ್ರೌಢಶಾಲೆಗಳನ್ನು ಉನ್ನತೀಕರಿಸಿ ಹೊಸದಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸುವ ಪ್ರಸ್ತಾವನೆ ಇದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು.

ಪ್ರಶೋತ್ತರ ವೇಳೆಯಲ್ಲಿ ಶಾಸಕ ವಿಶ್ವಾಸ್ ವಸಂತ ವೈದ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ನಿರ್ದೇಶಕರು ಕಳೆದ ಡಿ.9 ರಂದು ಈ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಆರ್ಥಿಕ ಇಲಾಖೆ ಅನುಮತಿ ದೊರೆತ ಕೂಡಲೇ ನಿಯಮಾನುಸಾರ ಕ್ರಮ ವಹಿಸುವುದಾಗಿ ಹೇಳಿದರು.

ಈ ಪ್ರಸ್ತಾವನೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮೊದ್ದೂರು ಸರ್ಕಾರಿ ಪ್ರೌಢಶಾಲೆಯನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯೂ ಇದೆ ಎಂದು ಸ್ಪಷ್ಟಪಡಿಸಿದರು.
ಬಜೆಟ್‌ನಲ್ಲಿ ಘೋಷಿಸಿರುವಂತೆ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸುವುದಾಗಿ ಸಚಿವರು ನುಡಿದರು.

RELATED ARTICLES

Latest News