ಸಲೂನ್ ಸ್ಪಾನಲ್ಲಿ ವೇಶ್ಯಾವಾಟಿಕೆ : ಮೂವರು ಮಹಿಳೆಯರ ರಕ್ಷಣೆ, ಆರೋಪಿ ಸೆರೆ

Spread the love

ಬೆಂಗಳೂರು, ಮೇ 24- ಸಲೂನ್ ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಯನ್ನು ಬಂಧಿಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವರ್ತೂರು ಎಸ್‍ಪಿ ಮಾನಸಿಸ್ ನೆಸ್ಟ್‍ನಿಂದ ಜಾಯ್ ಅಲ್ಯೂಕಾಸ್ ಮುಖ್ಯರಸ್ತೆಯಲ್ಲಿನ ಕಟ್ಟಡದಲ್ಲಿರುವ ಝೆನ್ ಗ್ಲೋ ಸಲೂನ್ ಸ್ಪಾ ಅಂಡ್ ವೆಲ್‍ನೆಸ್‍ನಲ್ಲಿ ಅಮಾಯಕ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.

ಕೇಂದ್ರ ಅಪರಾಧ ವಿಭಾಗದ ಮಹಿಳಾ ಸಂರಕ್ಷಣಾ ದಳದ ಅಕಾರಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಮಾರತ್ತಹಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಈ ಸಲೂನ್‍ನ ಲೈಸೆನ್ಸ್ ರದ್ದುಪಡಿಸಲು ಬಿಬಿಎಂಪಿಗೆ ತಿಳಿಸಲಾಗಿದೆ.

Facebook Comments