ಬೆಳಗಾವಿ,ಅ.4- ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಸ್ಥಳಗಳನ್ನು ಗುರತಿಸಿ ಕಾರ್ಯಾಚರಣೆ ನಡೆಸುವ ಮೂಲಕ ಮಕ್ಕಳನ್ನು ರಕ್ಷಣೆ ಮಾಡುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚನೆ ನೀಡಿದ್ದಾರೆ. ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿರುವ ಸಚಿವರು, ಹಿರಿಯ ಅಧಿಕಾರಿಗಳ ಹಾಗೂ ಸ್ಥಳೀಯ ಜನಾಪ್ರತಿನಿಧಿಗಳ ಜೊತೆ ಚರ್ಚೆ ನಡೆಸಿದರು. ಶಾಸಕರಾದ ಮಹಂತೇಶ್ ಕೌಜಲಗಿ, ಮಹೇಂದ್ರ ತಮ್ಮಣ್ಣನವರ್, ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಇಲಾಖೆ ಆಯುಕ್ತರಾದ ಗೋಪಾಲ ಕೃಷ್ಣ, ಜಿಲ್ಲಾಧಿಕಾರಿ ನಿತೇಶ್ ಪಟೇಲ್, ಎಸ್‍ಪಿ ಡಾ.ಭೀಮಾಶಂಕರ್ ಗುಳೇದ, ಸಿಇಒ ಗೋಯೆಲ್ ಹರ್ಷಲ್ ನಾರಾಯಣರಾವ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ
ಬಾಲಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗಾಗಿದೆ. ಓದುವ ಮಕ್ಕಳನ್ನು ದುಡಿಮೆಗೆ ತೊಡಗಿಸುವುದು ಕಾನೂನು ಬಾಹಿರ. ಇದರ ವಿರುದ್ಧ ನಿರಂತರವಾದ ಕಾರ್ಯಾಚರಣೆ ನಡೆಯಬೇಕು. ಬಾಲಕಾರ್ಮಿಕರನ್ನು ಗುರುತಿಸುವ ಸಲುವಾಗಿ ಅಸ್ತಿತ್ವದಲ್ಲಿರುವ ವಿಶೇಷ ಕಾರ್ಯಪಡೆಗಳನ್ನು ಸಕ್ರಿಯಗೊಳಿಸಬೇಕು ಎಂದು ಸೂಚಿಸಿದರು.
ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುತ್ತಿರುವ ಸ್ಥಳಗಳನ್ನು ಗುರುತಿಸಿ ನಿಗಾ ವಹಿಸಬೇಕು. ಸಂರಕ್ಷಿಸಲಾದ ಮಕ್ಕಳನ್ನು ಶಾಲೆಗೆ ಸೇರಿಸಿ ವಿದ್ಯಾಭ್ಯಾಸ ಕೊಡಿಸುವ ಮೂಲಕ ಪುನರ್‍ವಸತಿ ಕಲ್ಪಿಸಬೇಕು. ಅವರ ಪೋಷಕರಿಗೆ ಹೆಚ್ಚಿನ ತಿಳುವಳಿಕೆ ನೀಡಿ ಮಕ್ಕಳ ಭವಿಷ್ಯ ರೂಪಿಸಲು ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.