Monday, October 14, 2024
Homeರಾಜ್ಯರಾಜ್ಯಾದ್ಯಂತ ವ್ಯಾಪಿಸಿದ ಹನುಮ ಧ್ವಜದ ಕಿಚ್ಚು

ರಾಜ್ಯಾದ್ಯಂತ ವ್ಯಾಪಿಸಿದ ಹನುಮ ಧ್ವಜದ ಕಿಚ್ಚು

ಬೆಂಗಳೂರು,ಜ.29- ಮಂಡ್ಯ ಜಿಲ್ಲೆ ಕೆರೆಗೋಡು ಗ್ರಾಮದ ಹನುಮಧ್ವಜ ತೆರವುಗೊಳಿಸಿದ ಪ್ರಕರಣದ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಬೀದಿಗಿಳಿದು ಹೋರಾಟ ಮಾಡುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ ಅತ್ತ ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಕೂಡ ಹೋರಾಟಕ್ಕೆ ಧುಮುಕಿದ್ದಾರೆ.

ಕೇವಲ ಬೆಂಗಳೂರು ಮತ್ತು ಮಂಡ್ಯವಲ್ಲದೆ ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲೂ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಾದ ಭಜರಂಗದಳ, ವಿಶ್ವ ಹಿಂದು ಪರಿಷತ್ ಸೇರಿದಂತೆ ಮತ್ತಿತರರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ.

ಬೆಳಗ್ಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಆರ್.ಅಶೋಕ್, ವಿಧಾನಪರಿಷತ್ತಿನ ಸದಸ್ಯರಾದ ಡಾ.ತೇಜಸ್ವಿನಿ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ, ಜನಪ್ರತಿನಿಧಿಗಳು, ಮಾಜಿ ಶಾಸಕರು, ನಗರಪಾಲಿಕೆ ಮಾಜಿ ಸದಸ್ಯರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

BIG NEWS : 7 ದಿನಗಳಲ್ಲಿ ಭಾರತದಾದ್ಯಂತ ಸಿಎಎ ಜಾರಿ : ಶಂತನೂ ಠಾಕೂರ್

ಜೈ ಶ್ರೀರಾಮ್, ಜೈಜೈ ಶ್ರೀರಾಮ್, ಹನುಮಾನ್ ಕೀ ಜೈ, ಹಿಂದೂ ವಿರೋಧಿ ಸರಕಾರಕ್ಕೆ ಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದರು.

ಇನ್ನೊಂದೆಡೆ ಮಂಡ್ಯದ ಕೆರಗೋಡಿನಲ್ಲಿ ಪ್ರತಿಭಟನೆ ಕಾವು ಹೆಚ್ಚಾಗಿತ್ತು. ಮಾಜಿ ಸಚಿವ ಸಿ.ಟಿ.ರವಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಇಂದಿನ ಪ್ರತಿಭಟನೆಗೆ ಜೆಡಿಎಸ್ ಕೂಡ ಕೈ ಜೋಡಿಸಿದ್ದು ವಿಶೇಷವಾಗಿತ್ತು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕ ಎಚ್.ಟಿ.ಮಂಜುನಾಥ್, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ತಮ್ಮಣ್ಣ, ಜನಾರ್ದನ ರೆಡ್ಡಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಕೆರಗೋಡು ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಲ್ಲಿಂದ ಮಂಡ್ಯ ಜಿಲ್ಲಾಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಇದಕ್ಕೆ ಅವಕಾಶ ಕೊಡಲಿಲ್ಲ. 15ಕಿ.ಮೀ ಸಾಗಲಿರುವ ಪಾದಯಾತ್ರೆ ಹುಲಿವಾನ, ಸಾತನೂರು, ಚಿಕ್ಕಮಂಡ್ಯ ಮಾರ್ಗವಾಗಿ ಮಂಡ್ಯದ ಶ್ರೀಕಾಳಿಕಾಂಭ ದೇವಾಲಯ ಪ್ರವೇಶಿಸಲಿದೆ. ಅಲ್ಲಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಮುಂದುವರಿಯಲಿದೆ. ಡಿ.ಸಿ ಕಚೇರಿಗೆ ಮುತ್ತಿಗೆ ಹಾಕಿ ಹನುಮ ಧ್ವಜ ಪುನರ್ ಸ್ಥಾಪನೆಗೆ ಆಗ್ರಹಿಸಲಾಗುತ್ತದೆ.

BJP ಮತ್ತು RSS ಜನರನ್ನು ಪ್ರಚೋದಿಸುತ್ತಿವೆ : ಸಿಎಂ ಸಿದ್ದರಾಮಯ್ಯ

ಕೆರಗೋಡು ಗ್ರಾಮದಲ್ಲಿ ಬಿಗುವಿನ ವಾತಾವರಣವಿತ್ತು. ಭಾರೀ ಪ್ರಮಾಣದಲ್ಲಿ ಜಮಾಯಿಸಿದ್ದ ಜೈಶ್ರೀರಾಮ್ ಘೋಷಣೆಗಳನ್ನು ಕೂಗಿ ನಮ್ಮನ್ನು ಬಂಧಿಸಿ ಎಂದು ಸರ್ಕಾರದ ವಿರುದ್ಧ ಕ್ಕಾರ ಕೂಗಿದರು.

400ಕ್ಕೂ ಹೆಚ್ಚು ಪೆÇಲೀಸರ ನಿಯೋಜನೆ:
ಪಾದಯಾತ್ರೆ ವೇಳೆ ಅಹಿತಕರ ಘಟನೆ ನಡೆಯದಂತೆ ಖಾಕಿ ಕಟ್ಟೆಚ್ಚರ ವಹಿಸಿದೆ. ಕೆರಗೋಡು, ಪಾದಯಾತ್ರೆ ಮಾರ್ಗ, ಡಿಸಿ ಕಚೇರಿ ಬಳಿ ಬಿಗಿ ಭದ್ರತೆ ನಿಯೋಜಿಸಲಾಗಿತ್ತು. ಮಂಡ್ಯ ಎಸ್‍ಪಿ ಎನ್.ಯತೀಶ್ ನೇತೃತ್ವದಲ್ಲಿ ಬಂದೋಬಸ್ತ್ ನಿಯೋಜಿಸಲಾಗಿದ್ದು, ಎಸ್‍ಪಿ, ಎಎಸ್‍ಪಿ, ಇನ್‍ಸ್ಪೆಕ್ಟರ್ ಸೇರಿ 400ಕ್ಕೂ ಹೆಚ್ಚು ಪೊಲೀಸರ ವ್ಯವಸ್ಥೆ ಕಲ್ಪಿಸಲಾಗಿತ್ತು.

ಏನಿದು ಪ್ರಕರಣ:
ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್‍ನವರು ಕೆರಗೋಡು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಕಳೆದ 22ರಂದು ಹಾಕಲಾಗಿತ್ತು. ಈ ಮೊದಲು ಇಲ್ಲಿ ತ್ರಿವರ್ಣ ಧ್ವಜವನ್ನು ಹಾಕುವುದಾಗಿ ಗ್ರಾಮಪಂಚಾಯ್ತಿ ಷರತ್ತುಗಳಿಗೆ ಬದ್ದರಾಗುತ್ತೇವೆ ಎಂದು ಟ್ರಸ್ ಮುಚ್ಚಳಿಕೆ ಬರೆದುಕೊಟ್ಟಿತ್ತು. ಆದರೆ ಏಕಾಏಕಿ ಹನುಮಧ್ವಜ ಹಾರಿಸಿದ್ದು ವಿವಾದಕ್ಕೆ ಕಾರಣವಾಯಿತು. ನಿಯಮಗಳನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಎರಡು ದಿನಗಳ ಹಿಂದೆ ಜಿಲ್ಲಾಡಳಿತ ಹನುಮ ಧ್ವಜವನ್ನು ತೆರವುಗೊಳಿಸಿದ್ದು, ವಿವಾದದ ಕಿಡಿಗೆ ತುಪ್ಪ ಸುರಿವಂತೆ ಮಾಡಿತ್ತು.

RELATED ARTICLES

Latest News