Wednesday, August 13, 2025
Homeರಾಜ್ಯಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ರಾಜ್ಯಾದ್ಯಂತ ಭುಗಿಲೆದ್ದ ಪ್ರತಿಭಟನೆ

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ರಾಜ್ಯಾದ್ಯಂತ ಭುಗಿಲೆದ್ದ ಪ್ರತಿಭಟನೆ

Protests erupt across the state condemning propaganda against Dharmasthala

ಬೆಂಗಳೂರು, ಆ.13 : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಭಕ್ತರ ಆಕ್ರೋಶ ಭುಗಿಲೆದ್ದಿದ್ದು, ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ.
ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿ, ಅಪಪ್ರಚಾರ ಮಾಡುತ್ತಿರುವುದಲ್ಲದೇ ಧರ್ಮದ ಸನ್ನಿಧಿಗೆ ಅವಹೇಳನ ಮಾಡಲಾಗುತ್ತಿದೆ.

ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಯಚೂರು, ಬಾಗಲಕೋಟೆ, ಚಾಮರಾಜನಗರ, ಗದಗ, ಮೈಸೂರು, ಕಲಬುರಗಿ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ದಾವಣಗೆರೆ, ರಾಮನಗರ ಸೇರಿದಂತೆ ವಿವಿಧೆಡೆ ಬಹತ್‌ ಪ್ರತಿಭಟನೆಗಳು ನಡೆಯುತ್ತಿವೆ.

ಧರ್ಮಸ್ಥಳ ಪರ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಪುರಾಣ ಪ್ರಸಿದ್ಧವಾದ ಧರ್ಮ ಕ್ಷೇತ್ರಕ್ಕೆ ಧಕ್ಕೆ ತರುವ ಸುಳ್ಳು ನಿಂದನೆಗಳನ್ನು ಹಲವರು ಮಾಡಿ ಭಕ್ತರ ಮನಸ್ಸಿಗೆ ನೋವುಂಟು ಮಾಡುತ್ತಿದ್ದಾರೆ. ಗಿರೀಶ್‌ ಮಠಣ್ಣವರ್‌, ಮಹೇಶ್‌ ತಿಮರೋಡಿ, , ಸಮೀರ್‌, ಜಯಂತ್‌ ಮತ್ತಿತರರು ಅಪಪ್ರಚಾರ ಮಾಡುತ್ತಿದ್ದು, ಇವರ ಹಿಂದೆ ಯಾರಿದ್ದಾರೆ? ಸೂಕ್ತ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಸಾವಿರಾರು ಜನ ಧರ್ಮಸ್ಥಳ ಸಂಘದ ಮಹಿಳೆಯರು, ರೈತರು, ಭಕ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ನಗರದ ಚೆನ್ನಮ ವತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿತವರೆಗೂ ಪಾದಯಾತ್ರೆ ಮಾಡಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಯಾರೋ ಅನಾಮಿಕ ಹೇಳಿದಂತೆ ನೆಲ ಅಗೆದು ಧರ್ಮಸ್ಥಳವನ್ನು ಅಪವಿತ್ರ ಮಾಡಲಾಗುತ್ತಿದೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ 2000 ಕ್ಕೂ ಹೆಚ್ಚು ಭಕ್ತರು ರ್ಯಾಲಿ ನಡೆಸಿ ಆಕ್ರೋಶ ಹೊರಹಾಕಿದ್ದು, ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರಲು ಹೊರಟಿರುವ ಕುತಂತ್ರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೇ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಸಿದ್ದಾರೆ.ನಗರದ ತಾಲ್ಲೂಕು ಕಚೇರಿಯಿಂದ ಆಜಾದ್‌ ಪಾರ್ಕ್‌ವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರಲ್ಲದೇ, ಭುವನೇಶ್ವರಿ ವತ್ತದಲ್ಲಿ ಧರ್ಮಸ್ಥಳ ಉಳಿಸಿ ಎಂದು ಮಾನವ ಸರಪಳಿ ಮೂಲಕ ಆಕ್ರೋಶ ಹೊರಹಾಕಲಾಯಿತು.

ಗದಗ-ಕಲಬುರಗಿಯಲ್ಲಿ ವಿವಿಧ ಧಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಸ್ಥಾನ ಹಾಗೂ ವೀರೇಂದ್ರ ಹೆಗಡೆ ಕುಟುಂಬಕ್ಕೆ ಕಳಂಕ ತರುವ ಒಳಸಂಚು ನಡೆಸಲಾಗುತ್ತಿದ್ದು, ಇದನ್ನ ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಕೊಪ್ಪಳದಲ್ಲಿ ಜೈನ ಸಮುದಾಯ ಹಾಗೂ ಧರ್ಮಸ್ಥಳ ಭಕ್ತರ ವಂದದಿಂದ ಪ್ರತಿಭಟನೆ ನಡೆಸಿ, ಮಹೇಶ್‌ ತಿಮರೋಡಿ, ಗಿರೀಶ್‌ ಮಠಣ್ಣವರ್‌ ವಿರುದ್ಧ ಆಕ್ರೋಶ ಹೊರಹಾಕಲಾಯಿತು, ದಾವಣಗೆರೆ-ತುಮಕೂರಿನಲ್ಲೂ ಪ್ರತಿಭಟನೆ ನಡೆಸಿದ ಭಕ್ತರು, ಧರ್ಮ ರಕ್ಷಣೆಗೆ ನಾವು ಯಾವುದಕ್ಕೂ ಸಿದ್ಧ ಎಂದು ಎಚ್ಚರಿಕೆ ನೀಡಿದರು.ಅಲ್ಲದೇ ಆ.20ರಂದು ಧರ್ಮಸ್ಥಳಕ್ಕೆ ಬಹತ್‌ ಜಾಥಾ ನಡೆಸುವ ಮೂಲಕ ಭಕ್ತರ ಶಕ್ತಿಪ್ರದರ್ಶನ ನಡೆಸಲಿದ್ದೇವೆ. ಈ ಕೂಡಲೇ ಧರ್ಮಸ್ಥಳ ಕ್ಷೇತ್ರವನ್ನು ಅಪವಿತ್ರಗೊಳಿಸುವ ಕೆಲಸ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

Latest News