ಪಿಎಸ್ಐ ಪರೀಕ್ಷೆ ಅಕ್ರಮಕ್ಕೆ ಯತ್ನಿಸಿದರೆ ಕಠಿಣ ಕ್ರಮ

Social Share

ಬೆಂಗಳೂರು, ಜ.1- ಆಧುನಿಕ ತಂತ್ರಜ್ಞಾನದ ದುರ್ಬಳಕೆ ಒಳಗೊಂಡಂತೆ, ಯಾವುದೇ ರೀತಿಯಲ್ಲಿ ಅಕ್ರಮ ಹಾದಿ ಬಳಸಿ ಪಿಎಸ್ಐ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಪ್ರಯತ್ನಿಸುವ ಅಭ್ಯರ್ಥಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲು ಅಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಹುದ್ದೆಯ ಆಕಾಂಕ್ಷಿಗಳು ಮಾಡಿದ ಮನವಿಗೆ ಸಚಿವರು ಮೇಲಿನಂತೆ ಪ್ರತಿಕ್ರಿಯಿಸಿದರು.
ಸ್ಪರ್ಧಾತ್ಮಕ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಾಗುತ್ತಿದೆ. ಯಾವುದೇ ಸಂದೇಹ ಬೇಡ. ಅಕ್ರಮ ಗಳಿಗೆ ಅವಕಾಶವಿಲ್ಲದಂತೆ ಹಾಗೂ ಯಾರಿಗೂ ಅನ್ಯಾಯವಾಗದಂತೆ, ನಡೆಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Articles You Might Like

Share This Article