ಸಿಐಡಿ ತನಿಖೆ ವರದಿ ಬರುವವರೆಗೂ ಎಸ್‍ಐ ಪರೀಕ್ಷೆ ಇಲ್ಲ

Social Share

ಮೈಸೂರು,ನ.10-ಪಿಎಸ್‍ಐ ಅಕ್ರಮ ನೇಮಕಾತಿ ಕುರಿತು ಸಿಐಡಿ ತನಿಖೆ ನಡೆಯುತ್ತಿದ್ದು, ಅಂತಿಮ ವರದಿ ಬರುವವರೆಗೂ ಪರೀಕ್ಷೆ ನಡೆಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದಿಲ್ಲಿ ತಿಳಿಸಿದ್ದಾರೆ.

ನಗರ ಪೊಲೀಸ್ ಘಟಕದಲ್ಲಿ ನೂತನವಾಗಿ ನಿರ್ಮಿಸಿರುವ ಆಲನಹಳ್ಳಿ ನೂತನ ಪೊಲೀಸ್ ಠಾಣೆ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಿಎಸ್‍ಐ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಯುತ್ತಿದೆ. ಅಂತಿಮ ವರದಿ ಬರುವವರೆಗೂ ಪರೀಕ್ಷೆ ನಡೆಸುವುದಿಲ್ಲ. ಈಗಾಗಲೇ ಎಲ್ಲಾ ತನಿಖೆಗಳು ಪಾರದರ್ಶಕವಾಗಿ ನಡೆಯುತ್ತಿವೆ. ವರದಿಯನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಆಲನಹಳ್ಳಿ ಪೊಲೀಸ್ ಠಾಣೆಯನ್ನು 2.15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ರಾಜ್ಯಾದ್ಯಂತ 117 ಕೋಟಿ ರೂ. ವೆಚ್ಚದಲ್ಲಿ ನೂತನ ಠಾಣೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಮಹಿಳೆಯರ ಭದ್ರತಾ ದೃಷ್ಟಿಯಿಂದ ಪ್ರತಿ ಜಿಲ್ಲೆಯಲ್ಲಿ ಮಹಿಳಾ ಠಾಣೆ ತೆರೆಯಲು ನಿರ್ಧರಿಸಲಾಗಿದೆ. ಈ ಠಾಣೆಗಳಲ್ಲಿ ಮೂವರು ಮಹಿಳಾ ಸಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಿದರು.

‘ಒಂದು ದೇಶ ಒಂದು ಚುನಾವಣೆ’ ನಿರ್ಧಾರ ಶಾಸಕಾಂಗಕ್ಕೆ ಬಿಟ್ಟಿದ್ದು

ಈವರೆಗೂ ಶೇ.35ರಷ್ಟು ಪೊಲೀಸ್ ಹುದ್ದೆಗಳು ಖಾಲಿ ಇರುತ್ತಿತ್ತು. ಇದೀಗ 12 ಸಾವಿರ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಹಂತ ಹಂತವಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದರು. ಸಹಾಯವಾಣಿ 112ಕ್ಕೆ ಉತ್ತಮ ಸ್ಪಂದನೆ ಸಿಕ್ಕಿದ್ದು, ತೊಂದರೆ ಸಿಲುಕಿದವರು ಕರೆ ಮಾಡಿದ ಕ್ಷಣ ಮಾತ್ರದಲ್ಲೇ ಪೊಲೀಸರು ಸ್ಥಳಕ್ಕೆ ದಾವಿಸಿ ಸ್ಪಂದಿಸಲಿದ್ದಾರೆ.

ಟಿಕೆಟ್ ಹಂಚಿಕೆ ವಿಚಾರದಲ್ಲಿ ಗೊಂದಲ, ಕಳವಳಕ್ಕೀಡಾದ ಮೂಲ ಕಾಂಗ್ರೆಸ್ಸಿಗರು

ಇದರಿಂದ ಬಹುತೇಕ ಅಪರಾಧ ಪ್ರಕರಣಗಳು ನಿಯಂತ್ರವಾಗಲಿವೆ ಎಂದು ಹೇಳಿದರು. ಇಲಾಖೆಯಲ್ಲಿನ ಎಲ್ಲಾ ವ್ಯವಸ್ಥೆ, ಯೋಜನೆ, ಸೌಲಭ್ಯಗಳು ಪಾರದರ್ಶಕವಾಗಿ ನಡೆಯುತ್ತಿದ್ದು, ಜನಸ್ನೇಹಿ ಇಲಾಖೆಯಾಗಿ ಹೊರ ಹೊಮ್ಮಿದೆ ಎಂದರು.

Articles You Might Like

Share This Article