Monday, November 11, 2024
Homeರಾಜ್ಯಮೇ.8 ರಂದು ನಡೆಯಬೇಕಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ

ಮೇ.8 ರಂದು ನಡೆಯಬೇಕಿದ್ದ ಪಿಎಸ್ಐ ಪರೀಕ್ಷೆ ಮುಂದೂಡಿಕೆ

ಬೆಂಗಳೂರು,ಮಾ.21- ಪಿಎಸ್ಐ ಹುದ್ದೆಗಳ ನೇಮಕಾತಿಗೆ ಮೇ.8 ರಂದು ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, 402 ಪಿಎಸ್ಐ ಹುದ್ದೆಗಳ ನೇಮಕಾತಿಗೆ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಮುಂದಿನ ಪರೀಕ್ಷಾ ದಿನಾಂಕವನ್ನು ವೆಬ್ಸೈಟ್ನಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ. ಸರ್ಕಾರದ ಫೆ.22 ರ ಆದೇಶದನ್ವಯ, ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ ಹುದ್ದೆಗಳು, ಸೇವೆಯಲ್ಲಿರುವವರು ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕ ವೇಳಾಪಟ್ಟಿ ನಿಗದಿಪಡಿಸಲಾಗಿತ್ತು.

ದೇಶಾದ್ಯಂತ ಲೋಕಸಭಾ ಚುನಾವಣೆ ಹಿನ್ನೆಲಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

RELATED ARTICLES

Latest News