ಬೆಂಗಳೂರು, ಮಾ.4-ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ಅವಕಾಶ ಕಲ್ಪಿಸಿದೆ. ಮಾ.9ರಿಂದ 29ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಿರುವುದಾಗಿ ಕೆಎಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ.
ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ತಮ್ಮ ಶಿಕ್ಷಣ ಸಂಸ್ಥೆಯಲ್ಲದೆ, ಬೇರೆ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರಗಳಿಗೆ ಹೋಗಬೇಕಾಗಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆಗಳು ನಡೆಯುವ ದಿನದಂದು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಆಸ್ಟ್ರೇಲಿಯಾದಲ್ಲಿ ಮುಂದುವರೆದ ಹಿಂದೂ ದೇಗುಲಗಳ ಮೇಲೆ ದಾಳಿ
ಹಾಗೆಯೇ ಪರೀಕ್ಷಾ ಕೇಂದ್ರದಿಂದ ಮನೆಗೆ ಮರಳಲು ಕೂಡ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ನಿರ್ವಾಹಕರಿಗೆ ತೋರಿಸಿ ಬಸ್ಸುಗಳಲ್ಲಿ ಪ್ರಯಾಣಿಸಬಹುದಾಗಿದೆ.
PU exam, students, KSRTC, free bus,