ರಾಯಚೂರು, ಡಿ.9– ರಸ್ತೆಯಲ್ಲಿ ನಡೆದು ಹೋಗುವ ಯುವತಿಯರಿಗೆ ಪ್ಯಾಂಟ್ ಜೀಪ್ ಬಿಚ್ಚಿ ವಿಕೃತವಾಗಿ ವರ್ತಿಸುತ್ತಿದ್ದ ಪುಂಡ ಯುವಕನಿಗೆ ಸ್ಥಳೀಯರೇ ಥಳಿಸಿರುವ ಘಟನೆ ಪಟ್ಟಣದ ಸಾಯಿಬಾಬಾ ದೇವಾಲಯದ ರಸ್ತೆಯಲ್ಲಿ ನಡೆದಿದೆ.
ಕಾಲೇಜಿಗೆ ಹೋಗಿ ಬರುವ ಹಿಂದೂ ವಿದ್ಯಾರ್ಥಿಗಳು ಹಾಗೂ ಮಹಿಳೆಯರನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದ ವಿಕೃತ ಯುವಕ ಅವರ ಗಮನ ಸೆಳೆದು ತನ್ನ ಪ್ಯಾಂಟ್ ಜೀಪ್ ತೆಗೆದು ಅಸಭ್ಯವಾಗಿ ವರ್ತಿಸುತ್ತಿದ್ದ.
ಈ ದೃಶ್ಯವನ್ನು ಸ್ಥಳೀಯರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದರು.ನಿತ್ಯ ಇದೇ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದ ಯುವಕನ ಕಾಟದಿಂದ ಬೇಸತ್ತ ಸಾರ್ವಜನಿಕರು ಹಿಡಿದು ಮನಬಂದಂತೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಈ ಸಂಬಂಧ ರಾಯಚೂರು ಪಶ್ಚಿಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.