Sunday, April 28, 2024
Homeಜಿಲ್ಲಾ ಸುದ್ದಿಗಳುಸಾರ್ವಜನಿಕರಿಗೆ ಮೈಸೂರು ಅರಮನೆ ಪ್ರವೇಶ ನಿರ್ಬಂಧ

ಸಾರ್ವಜನಿಕರಿಗೆ ಮೈಸೂರು ಅರಮನೆ ಪ್ರವೇಶ ನಿರ್ಬಂಧ

ಮೈಸೂರು, ಅ. 7- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜಮನೆತನದವರಿಂದ ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ ನಡೆಯಲಿರುವ ಹಿನ್ನೆಲೆ ನವರಾತ್ರಿಯ ದಿನಗಳಲ್ಲಿ ಸಾರ್ವಜನಿಕರು, ಪ್ರವಾಸಿಗರಿಗೆ ಅರಮನೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.

ಅ. 9ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಸಿಂಹಾಸನ ಜೋಡಣೆ ಕಾರ್ಯಕ್ರಮದ ಪ್ರಯುಕ್ತ ಪ್ರವೇಶವಿರುವುದಿಲ್ಲ. ಅ.15ರಂದು ಖಾಸಗಿ ದರ್ಬಾರ್ ಹಿನ್ನೆಲೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರಮನೆಗೆ ಪ್ರವೇಶವಿರುವುದಿಲ್ಲ.

2000 ರೂ. ಮುಖಬೆಲೆಯ ನೋಟು ಬದಲಾವಣೆಗೆ ಇಂದೇ ಕೊನೆ ದಿನ

ಅ.23ರಂದು ಆಯುಧ ಪೂಜೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರು ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಅ.24ರಂದು ಜಂಬೂಸವಾರಿ ಪ್ರಯುಕ್ತ ಇಡೀ ದಿನ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧವಿದ್ದು, ಪಾಸ್ ಇದ್ದವರು ಅರಮನೆ ಅಂಗಳದಲ್ಲಿ ಜಂಬೂಸವಾರಿ ವೀಕ್ಷಿಸಲು ಅವಕಾಶ.

ನ.8 ರಂದು ಸಿಂಹಾಸನ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರಮನೆ ಪ್ರವೇಶವಿರುವುದಿಲ್ಲ ಎಂದು ಅರಮನೆ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES

Latest News