ನವದೆಹಲಿ,ನ.11- ಐತಿಹಾಸಿಕ ಕೆಂಪುಕೋಟೆ ಬಳಿ ಕಾರ್‌ಬಾಂಬ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸಾರ್ವಜನಿಕರ ಪ್ರವೇಶಕ್ಕೆ ದೆಹಲಿ ಆಯುಕ್ತರು ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರತಿದಿನ ಕೆಂಪುಕೋಟೆ ವೀಕ್ಷಣೆ ಮಾಡಲು ಸಾವಿರಾರು ಮಂದಿ ಆಗಮಿಸುತ್ತಾರೆ. ಅದರಲ್ಲೂ ವಾರದ ಕೊನೆಯ ದಿನವಾದ ಶನಿವಾರ, ಭಾನುವಾರ ಭಾರೀ ಸಂಖ್ಯೆಯಲ್ಲಿ ಬರುತ್ತಾರೆ. ಸೋಮವಾರ ಸಂಜೆ ಕೆಂಪುಕೋಟೆ ಸಮೀಪದ ಮೆಟ್ರೋ ರೈಲ್ವೆ ನಿಲ್ದಾಣದ ಬಳಿ ಹುಂಡೈ ಕಾರು ಸ್ಪೋಟಗೊಂಡು 9 ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡಿದ್ದರು. ಹೀಗಾಗಿ ಕೆಂಪುಕೋಟೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
