ಮೈಸೂರು,ಸೆ.25- ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಯವರ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮ ನಡೆಯುವ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 11.30ವರೆಗೆ ಸಾರ್ವಜನಿಕರಿಗೆ ಚಾಮುಂಡೇಶ್ವರಿ ದೇವಸ್ಧಾನದಲ್ಲಿ ದೇವರ ದರ್ಶನ ನಿರ್ಬಂಸಲಾಗಿದೆ.
ಇದನ್ನೂ ಓದಿ : ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು
ರಾಷ್ಟ್ರಪತಿಯವರ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾರ್ವಜನಿಕರು ಭಾಗವಹಿಸಬಹುದಾಗಿದೆ ಹಾಗೂ ಕಾರ್ಯಕ್ರಮ ಮುಗಿದ ನಂತರ ಎಂದಿನಂತೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.