ಬೆಂಗಳೂರು, ಫೆ.29- ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಎಂದು ಬಿಂಬಿಸಲಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಕ್ಷಣಗಣನೆ ಆರಂಭಗೊಂಡಿದೆ.ರಾಜ್ಯಾದ್ಯಂತ ನಾಳೆಯಿಂದ ಆರಂಭವಾಗಲಿರುವ ಪರೀಕ್ಷೆಗೆ ಸುಮಾರು 6,90,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ನಾಳೆ ಕನ್ನಡ ಹಾಗೂ ಅರೇಬಿಕ್ ಭಾಷೆಯ ಪರೀಕ್ಷೆಗಳು ಬೆಳಗ್ಗೆ 10.30ಕ್ಕೆ ಆರಂಭಗೊಳ್ಳಲಿವೆ.
ಮಾರ್ಚ್ 22ರ ವರೆಗೆ ನಡೆಯಲಿರುವ ಪರೀಕ್ಷೆಗೆ ಯಾವುದೇ ಅಡೆತಡೆಯಾಗದಂತೆ ಮತ್ತು ಯಾವುದೇ ಅಕ್ರಮ ನಡೆಯದಂತೆ ಕರ್ನಾಟಕ ರಾಜ್ಯ ಶಾಲಾ ಪರೀಕ್ಷಾ ಮಂಡಳಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ ಆಯಾ ನಗರ ಹಾಗೂ ತಾಲ್ಲೂಕು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 200 ಮೀಟರ್ವರೆಗೂ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಒಟ್ಟಾರೆ ಸುಮಾರು 1124 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಈಗಾಗಲೇ ಎಲ್ಲ ಸಿದ್ಧತೆಗಳೂ ಪೂರ್ಣಗೊಂಡಿವೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಲ್ಟಿಕೆಟ್ಗಳನ್ನು ಹೊಂದಿರಬೇಕು ಮತ್ತು ಕಾಲೇಜಿನ ಐಡೆಂಟಿಟಿ ಕಾರ್ಡ್ ಕೂಡ ಹೊಂದಿರಬೇಕು.
ಪರೀಕ್ಷಾ ಕೇಂದ್ರಗಳಿಗೆ ಅರ್ಧ ಗಂಟೆ ಮುಂಚೆ ಬಂದು ತಮ್ಮ ನೋಂದಣಿ ಸಂಖ್ಯೆಯನ್ನು ಪರಿಶೀಲಿಸಬೇಕು. ಯಾವುದೇ ಗೊಂದಲ ಮಾಡಿಕೊಳ್ಳದಂತೆ ವೆಬ್ಸೈಟ್ಗಳಲ್ಲಿ ನೀಡಿರುವ ಮಾಹಿತಿಯನ್ನು ವಿದ್ಯಾರ್ಥಿಗಳು ಪರಿಶೀಲಿಸಿ ನಿರ್ಭೀತಿಯಿಂದ ಪರೀಕ್ಷೆ ಬರೆಯಿರಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ಹಾಗೂ ಪರೀಕ್ಷೆ ಬರೆಯಲು ಡೆಸ್ಕ್ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು, ಶೌಚಾಲಯದ ಸೇರಿದಂತೆ ಮೂಲಭೂತ ಸೌಕರ್ಯದ ವ್ಯವಸ್ಥೆ ಕಲ್ಪಿಸಲಾಗಿದೆ. ಇದಲ್ಲದೆ, ಕೊಠಡಿಗಳಲ್ಲಿ ಗಡಿಯಾರ, ಸಿಸಿಟಿವಿ ಕಣ್ಗಾವಲು ಇದ್ದು, ಹೊರಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗುತ್ತಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಆದೇಶ ಹೊರಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮುಖ್ಯ ಅೀಕ್ಷಕರನ್ನು ನೇಮಕ ಮಾಡಲಾಗಿದೆ. ಮುಖ್ಯ ಅೀಕ್ಷಕರನ್ನು ಹೊರತುಪಡಿಸಿ ಕೊಠಡಿ ಮೇಲ್ವಿಚಾರಕರು, ಇತರೆ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮೊಬೈಲ್ ಇತ್ಯಾದಿ ಎಲೆಕ್ಟ್ರಾನಿಕ್ ಸಾಧನ ಬಳಸುವುದನ್ನು ಕಡ್ಡಾಯವಾಗಿ ನಿಷೇಸಲಾಗಿದೆ. ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ವಿತರಿಸಲು ಪ್ರಶ್ನೆ ಪತ್ರಿಕೆ ಮಾರ್ಗಾಕಾರಿ ತಂಡಗಳಿಗೆ ಅಗತ್ಯವಿರುವ ವಾಹನಗಳ ಸೌಕರ್ಯ ಒದಗಿಸಲಾಗಿದೆ.