ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ
ಬೆಂಗಳೂರು, ಮೇ 20- ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಇದನ್ನು ಖಚಿತಪಡಿಸಿದ್ದಾರೆ.
ಬರುವ ಜೂನ್ ತಿಂಗಳ ಮೂರನೇ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಾಗೇಶ್ ಹೇಳಿದ್ದಾರೆ.
ಇದೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದರು.
ಮೌಲ್ಯಮಾಪಕರ ಸಂಭಾವನೆ ಹೆಚ್ಚಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Facebook Comments